ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021
ಪ್ರತ್ಯೇಕ ಎರಡು ಘಟನೆಗಳಲ್ಲಿ ಟ್ರಾಕ್ಟರ್ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಎರಡು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ 1 : ಟ್ರಾಕ್ಟರ್ ಪಲ್ಟಿಯಾಗಿ ಸಾವು
ಜಮೀನು ಉಳುಮೆ ಮಾಡುವಾಗ ಟ್ರಾಕ್ಟರ್ ಪಲ್ಟಿಯಾಗಿದೆ. ಚಾಲಕ ಕೆಂಚಪ್ಪ (48) ಮೈ,ಕೈಗೆ ಗಂಭೀರ ಗಾಯವಾಗಿದ್ದು, ಮೃತಪಟ್ಟಿದ್ದಾರೆ. ಸಿದ್ಲಿಪುರದ ಕೆಂಚಪ್ಪ ಅವರು ಇಲ್ಲಿನ ಮಂಜಪ್ಪ ಎಂಬುವವರ ಜಮೀನಿನಲ್ಲಿ ಉಳುಮೆ ಮಾಡುವಾಗ ಘಟನೆ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ 2 : ಟ್ರಾಕ್ಟರ್ ಮೇಲಿಂದ ಬಿದ್ದು ಸಾವು
ಟ್ರಾಕ್ಟರ್ ಮಡ್ ಗಾರ್ಡ್ ಮೇಲೆ ಕೂತಿದ್ದ ವ್ಯಕ್ತಿಯೊಬ್ಬರು ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ರಾಗಿಹೊಸಹಳ್ಳಿಗೆ ಹೋಗುವ ಮಾರ್ಗದಲ್ಲಿ ಘಟನೆ ಸಂಭವಿಸಿದೆ. ಮಡ್ ಗಾರ್ಡ್ ಮೇಲೆ ಕೂತಿದ್ದ ಶಾಂತಪ್ಪ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಂಸಿ ಠಾಣೆಯಲ್ಲಿ ಚಾಲಕ ಪವನ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






