ಹೈವೇ ರಸ್ತೆಯಲ್ಲಿ ಉರುಳಿದ ಮರ, ಕಾರು ಪೀಸ್ ಪೀಸ್, ಒಳಗಿದ್ದವರಿಗೆ ಗಾಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SAGARA NEWS | 22 ಜುಲೈ 2021
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಕಾರಿನಲ್ಲಿದ್ದವರಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಾಗರ – ಆನಂದಪುರ ರಸ್ತೆಯ ಬನದಕೊಪ್ಪ ಎಂಬಲ್ಲಿ ಘಟನೆ ಸಂಭವಿಸಿದೆ. ಮರ ಬಿದ್ದಿದ್ದರಿಂದ ಕಾರಿನಲ್ಲಿದ್ದವರಿಗೆ ಗಾಯವಾಗಿದೆ. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಮರ ಬಿದ್ದ ರಭಸಕ್ಕೆ ಮಾರುತಿ ಕಾರು ನಜ್ಜುಗುಜ್ಜಾಗಿದೆ. ಪೊಲೀಸ್ ಇಲಾಖೆಯ 112 ವಾಹನ, ಹೈವೇ ಪ್ಯಾಟ್ರೋಲಿಂಗ್ ಸಿಬ್ಬಂದಿಗಳು ಪರಿಶೀಲನೆ ನಡೆಸಿದರು. ಅರಣ್ಯ ಇಲಾಖೆ ನೆರವಿನಿಂದ ಮರ ತೆರವು ಮಾಡಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಸಾಗರ ‍ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment