ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021
ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದೆ. ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಿಲಕನಗರ ಮುಖ್ಯ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಡಯಾನ ಬುಕ್ ಹೌಸ್ ಸಮೀಪ ಇದ್ದ ಮರ ಬುಡಮೇಲಾಗಿದೆ. ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬದ್ದಿದೆ.
ಕಾರು ನುಜ್ಜುಗುಜ್ಜು
ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ ಇಲಾಖೆಯವರು ಮರವನ್ನು ತೆರವು ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಳೆ, ಸ್ಮಾರ್ಟ್ ಸಿಟಿ ಕಾಮಗಾರಿ
ಈ ಭಾಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಚರಂಡಿ ಕಾಮಗಾರಿ ನಡೆಯುತ್ತಿದೆ. ಇನ್ನು, ಕಳೆದ ಮೂರ್ನಾಲ್ಕು ದಿನದಿಂದ ನಿರಂತ ಮಳೆಯಾಗುತ್ತಿದೆ. ಮರ ಬುಡಮೇಲಾಗಲು ಇದುವೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200