ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 JULY 2024
CRIME NEWS : ಚಲಿಸುತ್ತಿದ್ದ ಕಾರಿನ ಮೇಲೆ ಮರ (tree) ಬಿದ್ದು ಮೂವರು ಗಾಯಗೊಂಡಿದ್ದಾರೆ. ಜೋಗ ಬಳಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ವಾಹನ ಸವಾರನಿಗೆ ದಂಡ. ಇಲ್ಲಿದೆ ಮೂರು ಫಟಾಫಟ್ ಕ್ರೈಮ್ ನ್ಯೂಸ್
ಸಾಗರ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಶಿವಮೊಗ್ಗ ಲೈವ್.ಕಾಂ : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಅಂಬಾರಗೊಡ್ಲು ಬಳಿ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದ ವೆಂಕಟೇಶ್ ಎಂಬುವವರ ತಲೆಗೆ ತೀವ್ರ ಪೆಟ್ಟಾಗಿದೆ. ಅವರ ಪತ್ನಿ ಅರುಣಾ ಮತ್ತು 9 ವರ್ಷದ ಮಗನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಚನ್ನಗಿರಿಗೆ ಮರಳುವಾಗ ಬಿರುಸು ಮಳೆಯಿಂದಾಗಿ ಚಲಿಸುತ್ತಿದ್ದ ಕಾರಿನ ಮೇಲೆ ರಸ್ತೆ ಪಕ್ಕದ ಮರ ಬಿದ್ದಿದೆ.
ಜೋಗ್ಫಾಲ್ಸ್ ಡ್ರಂಕ್ ಅಂಡ್ ಡ್ರೈವ್, 10 ಸಾವಿರ ದಂಡ ಶಿವಮೊಗ್ಗ ಲೈವ್.ಕಾಂ : ಜೋಗ್ ಫಾಲ್ಸ್ ಸಮೀಪ ಮದ್ಯ ಸೇವಿಸಿ ವಾಹನ ಚಲಾಯಿಸಿ ವ್ಯಕ್ತಿಯೊಬ್ಬರು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಈ ಸಂಬಂಧ ಕಾರ್ಗಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಾಗರ ನ್ಯಾಯಾಲಯ ಸಂತೋಷ್ ಎಂಬಾತನಿಗೆ 10 ಸಾವಿರ ರೂ. ದಂಡ ವಿಧಿಸಿದೆ.
ಕುಂಸಿ ಸಾಗುವಾನಿ ಮರ ಕಡಿದು ಸಾಗಿಸುತ್ತಿದ್ದ ವ್ಯಕ್ತಿ ಅರೆಸ್ಟ್ ಶಿವಮೊಗ್ಗ ಲೈವ್.ಕಾಂ : ಅಕ್ರಮವಾಗಿ ಸಾಗುವಾನಿ ಮರ ಕಡಿದು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರವೀಣಯ್ಯ (43) ಬಂಧಿತ ಆರೋಪಿ. ಸೂಡೂರು ಮೀಸಲು ಅರಣ್ಯ ವ್ಯಾಪ್ತಿಯ ಗುರುಪಾದ ಮಟ್ಟಿ ಕಾಡಿನಲ್ಲಿ ಸಾಗುವಾನಿ ಮರ ಕಡಿದು ತುಂಡುಗಳನ್ನು ಸೈಕಲ್ನಲ್ಲಿ ಸಾಗಿಸುತ್ತಿದ್ದಾಗ ಅರಣ್ಯಾಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆಯಲ್ಲಿ ಆಯನೂರು ವಲಯ ಅರಣ್ಯಾಧಿಕಾರಿ ಗೀತಾ ವಿಠಲ್ ನಾಯಕ್, ಉಪವಲಯ ಅರಣ್ಯಾಧಿಕಾರಿ ವಸಂತ್ ಕುಮಾರ್, ಗಸ್ತು ಅರಣ್ಯ ಪಾಲಕ ದಸ್ತಗಿರ್ ಪಾಲ್ಗೊಂಡಿದ್ದರು.
ಇದನ್ನೂ ಓದಿ ⇓
ಗಾಳಿ, ಮಳೆಗೆ ಹಾರಿಹೋಯ್ತು ಸರ್ಕಾರಿ ಶಾಲೆಯ ಶೆಡ್, ತಪ್ಪಿತು ದೊಡ್ಡ ಅನಾಹುತ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422