ಆಗುಂಬೆ ಘಾಟಿಯ ತಿರುವಿನ ತಡೆಗೋಡೆ ಹತ್ತಿ ನಿಂತ ಲಾರಿ, ಈ ತಿಂಗಳಲ್ಲಿ ಎರಡನೇ ಕೇಸ್

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಆಗಸ್ಟ್ 2021

ಆಗುಂಬೆ ಘಾಟಿಯಲ್ಲಿ ಮತ್ತೊಂದು ಲಾರಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿಯೊಂದು ಆಗುಂಬೆ ಘಾಟಿಯ ಎಂಟನೇ ತಿರುವಿನಲ್ಲಿ ಕೆಳಗೆ ಜಾರಿದೆ. ಚಾಲಕನ ನಿಯಂತ್ರಣ ತಪ್ಪಿ ಪ್ರಪಾತದ ಕಡೆಗೆ ಮುಖ ಮಾಡಿ ನಿಂತಿದೆ. ಸೋಮವಾರ ಘಟನೆ ಸಂಭವಿಸಿದ್ದು, ಚಾಲಕ ಮತ್ತು ಕ್ಲೀನರ್ ಪಾರಾಗಿದ್ದಾರೆ.

AVvXsEjqI8PPMNmhmzTK72s6aHdyGOwaxgBbnPaxEgdNmEiwLVxu2qPFWOl6pNSi5TkLjb7eVIwUDa7oTDLioeFYHsTaIvxkbizculAS6mYiPjBUAXSI3yUj FPfEWxml8DJztTgufNzviEAb8 E9X6L8I0JOYK4raqr

ಲಾಜಿಸ್ಟಿಕ್ಸ್ ಕಂಪನಿಯೊಂದಕ್ಕೆ ಸೇರಿದ್ದ ಲಾರಿ ಅಪಘಾತಕ್ಕಿಡಾಗಿದೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಗಸ್ಟ್ 5ರಂದು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಘಾಟಿ ತಿರುವಿನಲ್ಲೂ ಲಾರಿಯೊಂದು ಅಪಘಾತಕ್ಕೀಡಾಗಿತ್ತು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment