ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಲಾರಿ ಪಲ್ಟಿ, ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಕ್ಕಳ ಪ್ರಾಣ

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 8 ಜನವರಿ 2022

ಸೈಕಲ್’ನಲ್ಲಿ ಏಕಾಏಕಿ ಅಡ್ಡ ಬಂದ ಮಕ್ಕಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಾರಿ ಪಲ್ಟಿಯಾಗಿದೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.


AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಹೊಸ ಸಿದ್ಧಾಪುರ ಗ್ರಾಮದ ಬಳಿ ರಸ್ತೆಯಲ್ಲಿ ಶಾಲಾ ಮಕ್ಕಳು ಸೈಕಲ್’ನಲ್ಲಿ ದಿಢೀರ್ ಮುಖ್ಯ ರಸ್ತೆಗೆ ಬಂದಿದ್ದಾರೆ. ಇವರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಲಾರಿಯನ್ನು ಚಾಲಕ ಪಕ್ಕಕ್ಕೆ ತಿರುಗಿಸಿದ್ದಾನೆ. ಲಾರಿ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ.

ಲಾರಿಯು ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ವೇಸ್ಟ್ ಪ್ಲಾಸ್ಟಿಕ್ ತುಂಬಿಕೊಂಡು ಹೋಗುತ್ತಿತ್ತು. ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Kalleshwara-Enterprises.webp

ABOUT ME DECEMBER REPORT

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment