ಶಿವಮೊಗ್ಗದಲ್ಲಿ ರಸ್ತೆ ಬದಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಮೆಕ್ಕಜೋಳದ ಮೂಟೆಗಳನ್ನು ಹೊತ್ತ ಲಾರಿ ಪಲ್ಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020

ವೇಗವಾಗಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ರಸ್ತೆ ಬದಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಪಲ್ಟಿಯಾದ ಲಾರಿ ಅಡಿ ಸಿಲುಕಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಚಾಲಕನಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೇಗಾಯ್ತು ಘಟನೆ?

ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪದ ಕೆಇಬಿ ಸರ್ಕಲ್‍ನಲ್ಲಿ ಘಟನೆ ಸಂಭವಿಸಿದೆ. ಬಾಲರಾಜ್‍ ಅರಸ್ ರಸ್ತೆಯಲ್ಲಿ ವೇಗವಾಗಿ ಬಂದ ಲಾರಿ, ಸರ್ಕಲ್‍ನಲ್ಲಿ ಬಲಕ್ಕೆ ತಿರುಗಿದೆ. ವೇಗ ಹೆಚ್ಚದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ವ್ಯಕ್ತಿ ಮೇಲೆ ಪಲ್ಟಿ

ಲಾರಿ ಪಲ್ಟಿಯಾದ ವೇಳೆ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಹೋಗುತ್ತಿದ್ದರು. ಅವರ ಮೇಲೆಯೇ ಲಾರಿ ಪಲ್ಟಿಯಾಗಿದೆ. ಲಾರಿಯಡಿ ಸಿಲುಕಿ ವ್ಯಕ್ತಿ ಮೃತರಾಗಿದ್ದಾರೆ. ಮೃತರು ಗೋಂದಿ ಚಟ್ನಳ್ಳಿಯ ಗ್ರಾಮದವರು ಎಂದು ಹೇಳಲಾಗುತ್ತಿದೆ.

111114951 1172240663137352 947553162733976481 o.jpg? nc cat=109& nc sid=110474& nc ohc=erAkZ2SB030AX8nHQiX& nc ht=scontent.fixe1 1

ಜೋಳ ಚೆಲ್ಲಾಪಿಲ್ಲಿ

ಲಾರಿಯಲ್ಲಿ ಜೋಳದ ಮೂಟೆಗಳಿದ್ದವು. ಪಲ್ಟಿಯಾಗುತ್ತಿದ್ದಂತೆ ಮೂಟೆಗಳು ಒಡೆದು, ರಸ್ತೆಯ ಮೇಲೆ ಮೆಕ್ಕೆ ಜೋಳದ ರಾಶಿ ಹರಡಿತ್ತು. ಲಾರಿ ಚಿತ್ರದುರ್ಗದ ಕಡೆಗೆ ತೆರಳುತ್ತಿದ್ದು ಎಂದು ತಿಳಿದು ಬಂದಿದೆ. ಅಪಘಾತ ಹಿನ್ನೆಲೆ ಕೆಲಕಾಲ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿತ್ತು. ಪೂರ್ವ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment