ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 9 DECEMBER 2024
ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ಅಪಘಾತಗಳು (Truck) ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್.
ಲಾರಿ, ಕಾರು ಮುಖಾಮುಖಿ ಡಿಕ್ಕಿ
ಆಯನೂರು : ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಆಯನೂರು ಸಮೀಪದ ದೊಡ್ದಾನಂದಿ ಗ್ರಾಮದ ಸಮೀಪ ಭಾನುವಾರ ಘಟನೆ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು, ಆಯನೂರು ಕಡೆಯಿಂದ ತೆರಳುತ್ತಿದ್ದ ಸಿಮೆಂಟ್ ತುಂಬಿದ್ದ ಲಾರಿ ಅಪಘಾತಕ್ಕೀಡಾಗಿವೆ. ಕಾರಿನಲ್ಲಿದ್ದ ತಂದೆ ಮತ್ತು ಮಗನಿಗೆ ಗಾಯವಾಗಿದೆ. ಕೂಡಲೆ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಯಿತು. ಲಾರಿ ಪಲ್ಟಿಯಾಗಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೊಬ್ಬರ ತುಂಬಿದ್ದ ಲಾರಿ ಪಲ್ಟಿ
ಹೊಸನಗರ : ಚಾಲಕನ ನಿಯಂತ್ರಣ ತಪ್ಪಿದ ಗೊಬ್ಬರದ ಲಾರಿ ಹೊಸನಗರ ಪಟ್ಟಣದಲ್ಲಿ ಪಲ್ಟಿಯಾಗಿದೆ. ಬೆಳಗಿನ ಜವಾ ಘಟನೆ ಸಂಭವಿಸಿದ್ದು, ಚಾಲಕನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ವಿದ್ಯುತ್ ತಂತಿ ತುಂಡಾಗಿದೆ. ಗೊಬ್ಬರ ತುಂಬಿದ್ದ ಲಾರಿ ಮಂಗಳೂರಿನಿಂದ ಸೊರಬಕ್ಕೆ ಲಾರಿ ತೆರಳುತ್ತಿತ್ತು. ಸ್ಥಳೀಯರು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮನೆಗೆ ನುಗ್ಗಿದ ಕಾರು
ಭದ್ರಾವತಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಪ್ರಾಣ ಹಾನಿ ತಪ್ಪಿದೆ ಎಂದು ತಿಳಿದು ಬಂದಿದೆ. ಜೇಡಿಕಟ್ಟೆ ಬಳಿ ಭಾನುವಾರ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ನವಜಾತ ಶಿಶು ರವಾನೆ, ಕಾರಣವೇನು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422