ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 25 FEBRUARY 2021
ದರೋಡೆಗೆ ಹೊಂಚು ಹಾಕುತ್ತಿದ್ದ ಮೂವರನ್ನು ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ವಾಜಪೇಯಿ ಬಡಾವಣೆಯಲ್ಲಿ ದರೋಡೆಗೆ ಹೊಂಚು ಹಾಕುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಗಾಡಿಕೊಪ್ಪದ ಸಂತೋಷ್ ಅಲಿಯಾಸ್ ಸಂತು, ಬೊಮ್ಮನಕಟ್ಟೆಯ ರೂಪೇಶ್ ಅಲಿಯಾಸ್ ರೂಪಿ ಹಾಗೂ ಎನ್.ಟಿ ರಸ್ತೆಯ ಶ್ರೀಹರಿ ಅಲಿಯಾಸ್ ಕಡ್ಡಿ ಎಂಬುವವರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಬಂಧಿತರಿಂದ ಕೃತ್ಯಕ್ಕೆ ಬಳಸಿದ 1 ಕಬ್ಬಿಣದ ರಾಡು, ಒಂದು ಚಾಕು, 150 ಗ್ರಾಂ ಖಾರದ ಪುಡಿ ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಡಿವೈಎಸ್‍ಪಿ ಪ್ರಶಾಂತ್ ಮುನ್ನೋಳಿ, ತುಂಗಾನಗರ ಸಿಪಿಐ ದೀಪಕ್ ಮಾರ್ಗದರ್ಶನದಲ್ಲಿ ತುಂಗಾನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ತಿರುಮಲೇಶ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಯ್ಯದ್ ಇಮ್ರಾನ್, ರಾಜು, ರವೀಂದ್ರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















