ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 1 ಫೆಬ್ರವರಿ 2020
ಶಿವಮೊಗ್ಗದ ಗೋಂಧಿ ಚಟ್ನಳ್ಳಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಬ್ಬರು ಯುವಕರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ನಿರ್ಧಾರ ಮಾಡಿದ್ದಾಳೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.
ಗೋಂಧಿ ಚಟ್ನಳ್ಳಿಯ ಸುಪ್ರಿಯಾ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಗ್ರಾಮಾಂತರ ಠಾಣೆ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಆದರೆ ಸುಪ್ರಿಯಾ ಅಂತ್ಯ ಸಂಸ್ಕಾರದ ವೇಳೆ ಆಗಮಿಸಿದ್ದ ಯುವಕನೊಬ್ಬನ ಮೇಲೆ ಸ್ಥಳೀಯರಿಗೆ ಅನುಮಾನ ಮೂಡಿದೆ. ಆತನ ವಿಚಾರಣೆ ನಡೆಸಿದಾಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಯುವಕನಿಗೆ ಧರ್ಮದೇಟು ನೀಡಿದ ಜನರು, ಪೊಲೀಸರಿಗೆ ಒಪ್ಪಿಸಿದ್ದಾರೆ. ಕಿರುಕುಳವೇ ಸುಪ್ರಿಯಾ ಆತ್ಮಹತ್ಯೆಗೆ ಕಾರಣ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಚಿತ್ರದುರ್ಗದ ಸುಬಾನ್ ಷರೀಫ್ ಬಂಧಿತ ಯುವಕ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಯುವತಿಗೆ ಕಿರುಕುಳ ಕೊಟ್ಟಿದ್ದೇಕೆ?
ಗೋಂಧಿ ಚಟ್ನಹಳ್ಳಿ ಗ್ರಾಮದ ಯುವಕನೊಬ್ಬನನ್ನು ಸುಪ್ರಿಯಾ ಪ್ರೀತಿಸುತ್ತಿದ್ದಳು ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಇಬ್ಬರ ನಡುವೆ ಮನಸ್ಥಾಪ ಉಂಟಾಗಿ ಇಬ್ಬರು ದೂರಾಗಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಇದೇ ಕಾರಣಕ್ಕೆ ಸುಪ್ರಿಯಾಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಪರಿಚಿತನಾಗಿದ್ದ ಚಿತ್ರದುರ್ಗದ ಸುಬಾನ್ ಷರೀಫ್ ಕೂಡ ಕಿರಿಕುಳ ಆರಂಭಿಸಿದ್ದ. ಇದರಿಂದ ಮನನೊಂದು ಸುಪ್ರಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422