ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜನವರಿ 2022
ಶರಾವತಿ ನಗರದ ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡುವ ಮೂಲಕ ಜನರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಯುವಕರನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ.
![]() |
ಬಂಧಿತರ ಪೈಕಿ ದಿಲೀಪ್(21) ಕಾಲೇಜು ವಿದ್ಯಾರ್ಥಿಯಾಗಿದ್ದರೆ, ಅಣ್ಣಾನಗರದ ಉಮೇಶ್ (23) ಕಟ್ಟಡ ಕಾರ್ಮಿಕ.
ಇಬ್ಬರು ಶರಾವತಿನಗರದ ತುಂಗಾ ನಾಲೆ ಭಾಗದಲ್ಲಿ ಲಾಂಗ್, ಮಚ್ಚು ಪ್ರದರ್ಶಿಸುತ್ತಿರುವ ಬಗ್ಗೆ ಮಾಹಿತಿ ಬಂದ ಕೂಡಲೇ ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸರನ್ನು ಕಂಡ ಯುವಕರು ಬೈಕ್‌ನಲ್ಲಿ ಪರಾರಿಯಾಗಲು ವಿಫಲ ಯತ್ನ ನಡೆಸಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200