ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SORABA NEWS | 14 ಜುಲೈ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮನೆಯಲ್ಲಿ ಯಾರು ಇಲ್ಲದ ವೇಳೆ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಸೊರಬ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರವಾಡ ಗ್ರಾಮದ ಮರಿಯಪ್ಪ ಗೋಪಿನಾಯ್ಕ್ ಹಾಗೂ ಕಮಲಮ್ಮ ನಿಂಗಬಸಪ್ಪ ಬಂಧಿತ ಆರೋಪಿಗಳು. ಇವರಿಂದ 37 ಗ್ರಾಂ ಬಂಗಾರ ಮತ್ತು 200 ಗ್ರಾಂ ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
ಅನುಮಾನಾಸ್ಪದವಾಗಿ ಓಡಾಡುತ್ತಿದ್ದ
ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಅನುಮಾನಸ್ಪದವಾಗಿ ತಿರುಗುತ್ತಿದ್ದ ಮರಿಯಪ್ಪನನ್ನು ಗಸ್ತು ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದರು. ಆಗ ಜನವರಿ 31ರಂದು ರಾಘವೇಂದ್ರ ಬಡಾವಣೆಯಲ್ಲಿ ಪ್ರೇಮಾ ನಾಗರಾಜ ಎಂಬುವವರ ಮನೆಯಲ್ಲಿ ಕಳವು ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಜೊತೆಗೆ ಆರೋಪಿಯು ಪುನಃ, ಪಟ್ಟಣಕ್ಕೆ ಕಳವು ಮಾಡಲೆಂದು ಹೊಂಚು ಹಾಕಿ ಬಂದಿರುವುದು ತಿಳಿದಿದೆ.
ಅತ್ತೆ-ಅಳಿಯ ಜೋಡಿ
ಕಾರವಾರದ ಶಿರವಾಡ ಗ್ರಾಮದವರದಾದ ಬಂಧಿತರಿಬ್ಬರು ಅತ್ತೆ-ಅಳಿಯ ಎಂಬುದು ವಿಶೇಷ. 10 ಗ್ರಾಂ ಬಂಗಾರವನ್ನು ಒಂದು ಕಡೆ ಒತ್ತೆ ಇಟ್ಟಿದ್ದ ಆರೋಪಿ ಮರಿಯಪ್ಪ, ಉಳಿದ 27 ಗ್ರಾಂ ಬಂಗಾರವನ್ನು ಅತ್ತೆಗೆ ನೀಡಿದ್ದು, ಆಕೆಯ ಹೆಸರಿನಲ್ಲಿ ಅಲ್ಲಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಒತ್ತೆ ಇಟ್ಟಿರುವುದು ತನಿಖೆ ವೇಳೆ ಬಹಿರಂಗಗೊಂಡಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀ ಪ್ರಸಾದ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್, ಡಿವೈಎಸ್ಪಿ ಶಿವಾನಂದ ಮರಕಂಡಿ ಹಾಗೂ ಸಿಪಿಐ ಆರ್.ಡಿ. ಮರುಳಸಿದ್ದಪ್ಪ ಮಾರ್ಗದರ್ಶನಲ್ಲಿ ಪಿಎಸ್ಐ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ದಾಳಿಯಲ್ಲಿ ಎಎಸ್ಐ ಶಬ್ಬೀರ್ ಖಾನ್, ಹೆಡ್ ಕಾನ್ಸ್ಟೇಬಲ್ ಪರಮೇಶ್ವರ ನಾಯ್ಕ್, ಎಂ.ಬಿ. ನಾಗರಾಜ, ಸಲ್ಮಾನ್ ಖಾನ್ ಹಾಜಿ, ಸಂದೀಪ್ ಕುಮಾರ್, ಯು. ಶಿವಾನಂದ, ಕೆ.ಎನ್. ಶಶಿಧರ, ಸಿದ್ದನಗೌಡ ಬಣಕಾರ, ಹೇಮಲತಾ ಪಾಲ್ಗೊಂಡಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200