ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 28 ಜುಲೈ 2021
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೃತರಾದ ಸವಾರರ ಗುರುತು ಪತ್ತೆಯಾಗಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ತಾಲೂಕಿನ ಬೂದಿಗೆರೆಯ ಪ್ರಭು (22) ಮತ್ತು ರಮೇಶ್ (25) ಮೃತರು. ಇವರು ಬೆಜ್ಜವಳ್ಳಿ ಕಡೆಯಿಂದ ಆಯನೂರು ಕಡೆಗೆ ಬರುವ ರಸ್ತೆಯಲ್ಲಿ ಹೊರಬೈಲು ಬಳಿ ಬೈಕ್‍ನಲ್ಲಿ ಬರುವಾಗ ಅಪಘಾತವಾಗಿದೆ.
ಹೇಗಾಯ್ತು ಅಪಘಾತ?
ಪ್ರಭು ಬೈಕ್ ಚಲಾಯಿಸುತ್ತಿದ್ದ. ಅತಿ ವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಓಡಿಸಿದ್ದರಿಂದ ಘಟನೆ ಸಂಭವಿಸಿದೆ. ರಸ್ತೆಯ ಎಡ ಭಾಗದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






