ಚಪ್ಪಲಿ ಸ್ಟಾಂಡ್‌ ವಿಚಾರವಾಗಿ ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿದ ಎದುರಾಬದುರಾ ಮನೆಯವರು, ಕಲ್ಲೇಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 FEBRUARY 2024

SHIMOGA : ಚಪ್ಪಲಿ ಸ್ಟಾಂಡ್‌ ವಿಚಾರವಾಗಿ ಎದುರಾಬದುರಾ ಮನೆಯವರ ಮಧ್ಯೆ ನಡೆಯುತ್ತಿದ್ದ ಜಗಳ ವಿಕೋಪಕ್ಕೆ ತಿರುಗಿ, ಕೈ ಕೈ ಮಿಲಾಯಿಸಿದ್ದಾರೆ. ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೆ. ಠಾಣೆಗೆ ದೂರು, ಪ್ರತಿದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

‘ಬೆಳಗ್ಗೆದ್ದರೆ ಚಪ್ಪಲಿ ದರ್ಶನ’

ಶಿವಮೊಗ್ಗದ ಅಶೋಕ ನಗರದಲ್ಲಿ ಘಟನೆ ಸಂಭವಿಸಿದೆ. ಫ್ಯಾಕ್ಟರಿ ಕಾರ್ಮಿಕ ಮತ್ತು ಆತನ ಎದುರು ಮನೆಯ ವ್ಯಕ್ತಿ ಮಧ್ಯೆ ಜಗಳವಾಗಿದೆ. ಎದುರು ಮನೆಯವರು ಅವರಿಗೆ ಸೇರಿದ್ದ ಜಾಗದಲ್ಲಿ ಚಪ್ಪಲಿ ಸ್ಟಾಂಡ್‌ ಇರಿಸಿದ್ದರು. ಫ್ಯಾಕ್ಟರಿ ಕಾರ್ಮಿಕನ ಮನೆ ಬಾಗಿಲು ತೆಗೆದರೆ ಚಪ್ಪಲಿ ಸ್ಟಾಂಡ್‌ ಕಾಣಿಸಿತ್ತಿತ್ತು. ಬೆಳಗ್ಗೆದ್ದು ಬಾಗಿಲು ತೆಗೆದರೆ ಚಪ್ಪಲಿ ದರ್ಶನವಾಗುತ್ತದೆ ಎಂದು ಫ್ಯಾಕ್ಟರಿ ಕಾರ್ಮಿಕನ ಕುಟುಂಬದವರು ಆಕ್ಷೇಪಿಸಿದ್ದರು. ಈ ವಿಚಾರವಾಗಿ ಹಲವು ಬಾರಿ ಇಬ್ಬರ ಮಧ್ಯೆ ಜಗಳವಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಫ್ಯಾಕ್ಟರಿ ಕಾರ್ಮಿಕನ ದೂರಿನಲ್ಲಿ ಏನಿದೆ?

ಭಾನುವಾರ ಬೆಳಗ್ಗೆ ಫ್ಯಾಕ್ಟರಿ ಕಾರ್ಮಿಕ ಎದುರು ಮನೆಯವರ ಚಪ್ಪಲಿ ಸ್ಟಾಂಡ್‌ ಕಾಣದಂತೆ ಅಡ್ಡಲಾಗಿ ಫೈಬರ್‌ ಶೀಟ್‌ ಇರಿಸಿದ್ದ. ಇದನ್ನು ಗಮನಿಸಿದ ಎದುರು ಮನೆಯಾತ ಭಾನುವಾರ ರಾತ್ರಿ ಗಲಾಟೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ, ಕೈ ಕೈ ಮಿಲಾಯಿಸಿದ್ದಾರೆ. ಎದುರು ಮನೆಯಾತ ಫ್ಯಾಕ್ಟರಿ ಕಾರ್ಮಿಕನ ತಲೆಗೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಎದುರು ಮನೆಯಾತನ ದೂರಿನಲ್ಲೇನಿದೆ?

ಗಲಾಟೆ ವೇಳೆ ಎದುರು ಮನೆಯಾತ ಫ್ಯಾಕ್ಟರಿ ಕಾರ್ಮಿಕನನ್ನು ದಬ್ಬಿದ್ದಾನೆ. ಆಗ ಫ್ಯಾಕ್ಟರಿ ಕಾರ್ಮಿಕ ಅಲ್ಲಿದ್ದ ಕಲ್ಲಿನಿಂದ ಎದುರು ಮನೆಯಾತನ ಕಣ್ಣಿನ ಕೆಳಭಾಗಕ್ಕೆ ಹೊಡೆದಿದ್ದಾನೆ. ಮೈಕೈಗು ಹೊಡೆದಿದ್ದು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾಗಿ ಆರೋಪಿಸಿದ್ದಾರೆ.

ಘಟನೆ ಸಂಬಂಧ ಇಬ್ಬರು ದೂರಗಳನ್ನು ಸ್ವಕೀರಿಸಿರುವ ದೊಡ್ಡಪೇಟೆ ಠಾಣೆ ಪೊಲೀಸರು, ಪ್ರತೇಕ ಎಫ್‌ಐಆರ್‌ ದಾಖಲಿಸಿದ್ದಾರೆ.

ಇದನ್ನೂ ಓದಿ – ಭದ್ರಾ ನದಿ, ನಾಲೆ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 20, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment