SHIVAMOGGA LIVE NEWS | 7 AUGUST 2023
SHIMOGA : ಕುಟುಂಬ ಸಹಿತ ಎರಡು ಮನೆಯವರು ಧರ್ಮಸ್ಥಳಕ್ಕೆ ತೆರಳಿದ್ದ ಸಂದರ್ಭ ಬಾಗಿಲುಗಳ ಬೀಗ ಮುರಿದು ಕಳ್ಳತನ (Theft) ಮಾಡಲಾಗಿದೆ. ರಾಗಿಗುಡ್ಡ 7ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ.
ಆಟೋ ಚಾಲಕ ಶಿವಕುಮಾರ್ ಮತ್ತು ಅವರ ಸಹೋದರಿ ಯೋಗೇಶ್ವರಿ ಅವರು ಅಕ್ಕಪಕ್ಕದ ಮನೆಗಳಲ್ಲಿ ವಾಸವಾಗಿದ್ದಾರೆ. ಆ.3ರಂದು ಎರಡು ಕುಟುಂಬದವರು ಮನೆಗಳಿಗೆ ಬೀಗ ಹಾಕಿ ಧರ್ಮಸ್ಥಳಕ್ಕೆ ತೆರಳಿದ್ದರು. ಮರಳಿ ಬಂದಾಗ ಮನೆ ಬಾಗಿಲಿನ ಬೀಗ ಮುರಿದು ಕಳ್ಳತನ (Theft) ಮಾಡಿರುವುದು ಗೊತ್ತಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ವ್ಯಕ್ತಿಯ ರಾಬರಿ, ವಿಳಾಸ ಕೇಳುವ ನೆಪದಲ್ಲಿ ಅಟ್ಯಾಕ್
ಎರಡು ಮನೆಯಲ್ಲಿ 14,500 ರೂ. ನಗದು, ಚಿನ್ನ, ಬೆಳ್ಳಿಯ ಆಭರಣಗಳು ಸೇರಿ 61,100 ರೂ. ಮೊತ್ತದ ವಸ್ತುಗಳು ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.