ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | AGUMBE NEWS | 26 ಸೆಪ್ಟೆಂಬರ್ 2021
ಕದ್ದ ಬೈಕ್’ನಲ್ಲಿ ತೆರಳುತ್ತಿದ್ದ ಇಬ್ಬರು ಅಂತರ್ಜಿಲ್ಲಾ ಬೈಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಖದೀಮರು ಬೈಕ್ ಕಳವು ಮಾಡಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆಗುಂಬೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಕಳ್ಳರನ್ನು ಬಂಧಿಸಿದ್ದಾರೆ. ಇವರ ವಿಚಾರಣೆ ನಡೆಸಲಾಗುತ್ತಿದೆ.
ಮಂಗಳೂರಿನಲ್ಲಿ ಬೈಕ್ ಕದ್ದಿದ್ದರು
ಬಂಧಿತರನ್ನು ಧಾರವಾಡ ಜಿಲ್ಲೆಯ ನವಲಗುಂದದ ಆದರ್ಶ ಮತ್ತು ಅನ್ವರ್ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಬೈಕ್ ಕಳವು ಮಾಡಿಕೊಂಡು, ಆಗುಂಬೆ ಮಾರ್ಗವಾಗಿ ತೆರಳುತ್ತಿದ್ದರು. ಶಂಕೆ ಮೇರೆಗೆ ಪೊಲೀಸರು ವಿಚಾರಣೆ ನಡೆಸಿದಾಗ ಇವರು ಬೈಕ್ ಕಳ್ಳರು ಎಂಬುದ ಗೊತ್ತಾಗಿದೆ. ಇಬ್ಬರನ್ನು ಬಂಧಿಸಿದ್ದು, ಅವರ ತಂದಿದ್ದ ಬೈಕನ್ನು ವಶಕ್ಕೆ ಪಡೆಯಲಾಗಿದೆ.
ಅರ್ಧ ಕರ್ನಾಟಕದಲ್ಲಿ ಕಳ್ಳತನ
ಆದರ್ಶ ಮತ್ತು ಅನ್ವರ್, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಬೆಂಗಳೂರು, ತುಮಕೂರು, ಮಂಗಳೂರು, ಬೆಳಗಾವಿ, ಗದಗ, ಧಾರವಾಡ ಸೇರಿದಂತೆ ವಿವಿಧೆಡೆ ಬೈಕ್ ಕಳವು ಮಾಡಿದ್ದಾರೆ. ಇವರ ವಿರುದ್ಧ ಹಲವು ಠಾಣೆಗಳಲ್ಲಿ ಹನ್ನೊಂದು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ | ಮನೆ ಮುಂದೆ ನಿಲ್ಲಿಸಿದ್ದ ಬೈಕುಗಳು ನಾಪತ್ತೆ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೈಕ್ ಕಳ್ಳತನ
ಆಗುಂಬೆ ಠಾಣೆ ಪಿಎಸ್ಐ ಶಿವಕುಮಾರ್, ಸಿಬ್ಬಂದಿ ವೀರೇಂದ್ರ, ರಾಘವೇಂದ್ರ, ಉಲ್ಲಾಸ್, ಸುದರ್ಶನ್, ಗಣೇಶ್, ಮಂಜುನಾಥ್ ಹಂಪಿಹೊಳಿ, ಮಂಜುನಾಥ ಮಳ್ಳಿ, ಜ್ಞಾನೇಂದ್ರ, ನವೀನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200