SHIVAMOGGA LIVE NEWS | 3 JANUARY 2023
SHIMOGA : ಎರಡು ಪ್ರತ್ಯೇಕ ಪ್ರಕರಣದಲ್ಲಿ ಚಿಕಿತ್ಸೆಗೆಂದು ಶಿವಮೊಗ್ಗದ ಎರಡು ಆಸ್ಪತ್ರೆಗೆ ಬಂದಿದ್ದ ಇಬ್ಬರು ರೋಗಿಗಳು ನಾಪತ್ತೆಯಾಗಿದ್ದಾರೆ (missing). ಈ ಸಂಬಂಧ ಎರಡು ದೂರು ದಾಖಲಾಗಿದೆ.
ಪ್ರಕರಣ 1 – ಮಾನಸಿಕ ಅಸ್ವಸ್ಥೆ ನಾಪತ್ತೆ
ಶಿವಮೊಗ್ಗ ಮಾನಸ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆಗೆಂದು ಬಂದಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಚಿಗಳಿಕಟ್ಟೆ ಗ್ರಾಮದ ದುರ್ಗಮ್ಮ (50) ನಾಪತ್ತೆಯಾಗಿರುವ ಮಹಿಳೆ. ಚಿಕಿತ್ಸೆಗೆಂದು ಮಾನಸ ನರ್ಸಿಂಗ್ ಹೋಂನಲ್ಲಿ ದಾಖಲಾಗಿದ್ದರು. ಡಿ.25ರಂದು ಆಸ್ಪತ್ರೆಯಿಂದ ದುರ್ಗಮ್ಮ ತಪ್ಪಿಸಿಕೊಂಡಿದ್ದಾರೆ (missing). ಇವರ ಸುಳಿವು ಸಿಕ್ಕಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಕರಣ 2 – ಚಿಕಿತ್ಸೆಗೆ ಬಂದವರು ಕಾಣೆ
ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿಯೊಬ್ಬರು ಕಾಣೆಯಾಗಿದ್ದಾರೆ. ಸೊರಬ ತಾಲೂಕಿನ ರಮೇಶ್ (35) ನಾಪತ್ತೆಯಾಗಿದ್ದಾರೆ. ನ.19ರಂದು ರಮೇಶ್ ಅವರು ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದರು. ಆ ಬಳಿಕ ಅವರು ನಾಪತ್ತೆಯಾಗಿದ್ದಾರೆ. ಇವರ ಕುರಿತು ಸುಳಿವು ಸಿಕ್ಕಲ್ಲಿ ದೊಡ್ಡಪೇಟೆ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಮನೆಯ ಶೌಚಾಲಯದಲ್ಲಿ ನೇಣು ಬಿಗಿದು ವ್ಯಕ್ತಿ ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200