ಶಿವಮೊಗ್ಗ: ಎರಡು ಪ್ರತ್ಯೇಕ ಪ್ರಕರಣದಲ್ಲಿ ವಿನೋಬನಗರ ಠಾಣೆ ಪೊಲೀಸರು ಇಬ್ಬರು ಕಳ್ಳರನ್ನು ಅರೆಸ್ಟ್ ಮಾಡಿ, ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪ್ರಕರಣ 1
ನವುಲೆಯ ಶಿವಬಸವ ನಗರ ಕ್ರಾಸ್ ಬಳಿ ಅಕ್ಟೋಬರ್ 10ರಂದು ಬೆಳಗಿನ ಜಾವ 4 ಗಂಟೆಗೆ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅಡ್ಡಗಟ್ಟಿದ್ದ. ಉಂಗುರ, ನಗದು ಕಸಿದುಕೊಂಡು ವ್ಯಕ್ತಿಯನ್ನ ತಳ್ಳಿ ಪರಾರಿಯಾಗಿದ್ದ.
ಈ ಪ್ರಕರಣ ಸಂಬಂಧ ಸಚಿನ್ ಅಲಿಯಾಸ್ ಶ್ಯಾಡೋ (27) ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ₹55,000 ಮೌಲ್ಯದ 7.90 ಗ್ರಾಂ ತೂಕದ ಬಂಗಾರದ ಸರ, ₹55,000 ನಗದು, ಕೃತ್ಯಕ್ಕೆ ಬಳಸಿದ್ದ ಪಲ್ಸರ್ ಬೈಕ್ ವಶಕ್ಕೆ ಪಡೆದಿದ್ದಾರೆ.
ಪ್ರಕರಣ 2
ಆಲ್ಕೊಳದ ಮಂಗಳ ಮಂದಿರ ಸಮೀಪ ಬೆಳಗ್ಗೆ ಮನೆ ಮುಂದೆ ರಂಗೋಲೆ ಹಾಕುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದುಕೊಂಡು ಕಳ್ಳನೊಬ್ಬ ಪರಾರಿಯಾಗಿದ್ದ.
ಆರೋಪಿ ಭುವನೇಶ್ವರ ಅಲಿಯಾಸ್ ಭುವನ (26) ಎಂಬಾತನನ್ನು ಬಂಧಿಸಿದ್ದು, ಆತನಿಂದ ₹1.30 ಲಕ್ಷ ಮೌಲ್ಯದ 13 ಗ್ರಾಂ ತೂಕದ ಬಂಗಾರದ ಸರ, ಗುಂಡುಗಳು, ಕೃತ್ಯಕ್ಕೆ ಬಳಸಿದ್ದ ಸ್ಪ್ಲೆಂಡರ್ ಪ್ಲಸ್ ಬೈಕ್ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ » ರಿಂಗ್ ರಸ್ತೆಯಲ್ಲಿ ಓಡಾಡುವಾಗ ಹುಷಾರ್, ಬೈಕಿನಲ್ಲಿ ತೆರಳಿದ್ದ ಯುವಕ, ಯುವತಿಯಿಂದ ಕೇಸ್ ದಾಖಲು
ವಿನೋಬನಗರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಡಿ.ಕೆ ಉಸ್ತುವಾರಿಯಲ್ಲಿ ಪಿಎಸ್‌ಐ ತಿರುಮಲೇಶ್.ಜಿ, ಸಿಬ್ಬಂದಿ ರಾಜು, ಮನುಶಂಕರ್, ಮಲ್ಲಪ್ಪ.ಎಸ್.ಜಿ, ಅರುಣ ಕುಮಾರ್ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.
LATEST NEWS
- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

About The Editor
ನಿತಿನ್ ಆರ್.ಕೈದೊಟ್ಲು






