ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MARCH 2021
ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಅಪ್ಪ, ಮಗನಿಗೆ ಶಿವಮೊಗ್ಗದ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಜೈಲು ಶಿಕ್ಷೆಯ ಜೊತೆಗೆ, ನೊಂದ ಮಹಿಳೆಗೆ ಪರಿಹಾರವನ್ನು ನೀಡಬೇಕು ಎಂದು ಆದೇಶಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಏನಿದು ಪ್ರಕರಣ?
ಶಿರಾಳಕೊಪ್ಪದ ಕುಸ್ಕೂರು ನಿವಾಸಿಗಳಾದ ವೆಂಕಟೇಶ ನಾಯ್ಕ್ ಮತ್ತು ಚಿನ್ನಯ್ಯನಾಯ್ಕ್ ಶಿಕ್ಷೆಗೆ ಒಳಗಾದವರು. ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯವು ಇವರಿಗೆ ಒಂದು ವರ್ಷದ ಸಾದಾ ಸಜೆ ಮತ್ತು ನೊಂದ ಮಹಿಳೆಗೆ ಹತ್ತು ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
ವೆಂಕಟೇಶ ನಾಯ್ಕ್, ಶಾರದಾ ಎಂಬುವವರೊಂದಿಗೆ ಮದುವೆ ಆಗಿದ್ದರು. ಆ ಬಳಿಕ ತವರಿನಿಂದ ವರದಕ್ಷಿಣೆ ತರುವಂತೆ ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯ ಮಹಿಳೆಯ ಗಂಡ ಮತ್ತು ಮಾವನಿಗೆ ಶಿಕ್ಷೆ ವಿಧಿಸಿದೆ. ಸರ್ಕಾರಿ ಅಭಿಯೋಜಕ ಜಿ.ಕೆ.ಕಿರಣ್ ಕುಮಾರ್ ವಾದ ಮಂಡಿಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]