ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿ ಸಾವು; ವಾರಸುದಾರರ ಪತ್ತೆಗೆ ಪೊಲೀಸರ ಮನವಿ

ಶಿವಮೊಗ್ಗ: ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್ ಮೊಹಲ್ಲಾದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 45-50 ವರ್ಷ ವಯೋಮಿತಿಯ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ (Death news). ಮೃತರ ಹೆಸರು ಹಾಗೂ ವಿಳಾಸದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಮೇ 4ರಂದು ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಈ ವ್ಯಕ್ತಿ ಅಸ್ವಸ್ಥರಾಗಿ ಬಿದ್ದಿದ್ದರು. ಗಮನಿಸಿದ ಸಾರ್ವಜನಿಕರು ತಕ್ಷಣ ಅಂಬುಲೆನ್ಸ್ (Ambulance service) ಮೂಲಕ ಅವರನ್ನು ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ (Government hospital) ದಾಖಲಿಸಿದ್ದರು. ಮೇ 5ರಂದು ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

Kote-Police-Station-Shivamogga

Kote-Police-Station-Shivamogga

ಮೃತ ವ್ಯಕ್ತಿಯ (Deceased person) ಎತ್ತರ 5 ಅಡಿ, ದುಂಡು ಮುಖ, ದೃಢಕಾಯ ಮೈಕಟ್ಟು ಮತ್ತು ಬಿಳಿ ಮೈಬಣ್ಣ ಹೊಂದಿದ್ದರು. ಮೆರೂನ್ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಫಾರ್ಮಲ್ ಪ್ಯಾಂಟ್ (Formal pants) ಧರಿಸಿದ್ದಾರೆ ಎಂದು ತಿಳಿಸಲಾಗಿದೆ.

ವ್ಯಕ್ತಿಯ ವಾರಸುದಾರರ (Legal heirs) ಬಗ್ಗೆ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ತಕ್ಷಣವೇ ಕೋಟೆ ಪೊಲೀಸ್ ಠಾಣೆಯನ್ನು (Police station) ಖುದ್ದಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ (Contact number) 08182-261415 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ (Police notification) ತಿಳಿಸಿದೆ.

 

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗ ಬಳಿ ಕಾರು ಪಲ್ಟಿ, ಬೆಂಗಳೂರಿನ ನಾಲ್ವರಿಗೆ ಗಾಯ, ಹೇಗಾಯ್ತು ಘಟನೆ?