ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021
ರಸ್ತೆ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಾರ್ವಜನಿಕರ ಎದುರಲ್ಲೇ ಆತ ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ.
ಮಂಡ್ಲಿಯ ಪಂಪ್ ಹೌಸ್ ಕಾಂಪೌಂಡ್ ಬದಿಯಲ್ಲಿ ಘಟನೆ ಸಂಭವಿಸಿದೆ. ವ್ಯಕ್ತಿಯೊಬ್ಬ ನೀರಿನ ಪೈಪ್ ಮೇಲೆ ಬಂದು ಕುಳಿತಿದ್ದ. ಕೆಲವೇ ಕ್ಷಣದಲ್ಲಿ ಆತ ಪೈಕ್ ಪಕ್ಕದಲ್ಲಿ ಬಿದ್ದಿದ್ದಾನೆ. ಸ್ಥಳೀಯರು ಗಮನಿಸಿದಾಗ ಆತ ಮೃತಪಟ್ಟಿರುವುದು ದೃಢಪಟ್ಟಿದೆ.
ಮೃತನಿಗೆ 35 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಜೀನ್ಸ್ ಪ್ಯಾಂಟು, ಟೀ ಶರ್ಟ್ ಧರಿಸಿದ್ದಾನೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು, ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು.


LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














