SHIVAMOGGA LIVE NEWS | 7 APRIL 2023
SHIMOGA : ರೈಲ್ವೆ ನಿಲ್ದಾಣದಲ್ಲಿ (Railway Station) ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ವಾರಸುದಾರರು ಇದ್ದಲ್ಲಿ ರೈಲ್ವೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ರೈಲ್ವೆ ನಿಲ್ದಾಣ (Railway Station) ಶೆಲ್ಟರ್‌ನಲ್ಲಿ ಏ.5 ಯುವಕನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತನಿಗೆ ಅಂದಾಜು 25 ರಿಂದ 30 ವರ್ಷವಾಗಿರಬಹುದು. 5.8 ಅಡಿ ಎತ್ತರ. ಸಾಧಾರಣ ಮೈಕಟ್ಟು, ಸಾಧಾ ಕಪ್ಪು ಮೈಬಣ್ಣ, ಸಾಧಾ ಕಪ್ಪು ಮೈಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು ಕೂದಲು ಹಾಗೂ ಸುಮಾರು 1 ಇಂಚು ಉದ್ದದ ಗಡ್ಡ ಮೀಸೆ ಬಿಟ್ಟಿರುತ್ತಾನೆ. ನೀಲಿ ಗುಲಾಬಿ ಬಣ್ಣದ ಟೀ ಶರ್ಟ್, ಬೂದು ಬಣ್ಣದ ಕಾಟನ್ ಪ್ಯಾಂಟ್, ಕೈಯಲ್ಲಿ ಸಿಲ್ವರ್ ಬಣ್ಣದ ಕಡಗ, ಎರಡು ಕಿವಿಯಲ್ಲಿ ಫ್ಯಾಷನ್ ರಿಂಗ್ ಧರಿಸಿರುತ್ತಾನೆ. ಬಲಗೈಯಲ್ಲಿ ಅಮ್ಮ, ರಾಜಹುಲಿ ಹಾಗೂ ತೋಳಿನಲ್ಲಿ ಸುಜಾತಾ ಎಂದು ಹಚ್ಚೆ ಹಾಕಿಸಿದ್ದಾನೆ. ಎಡಗಡೆ ಎದೆ ಮೇಲೆ ವಿಷ್ಣುದಾದ ಎಂದು ಹಚ್ಚೆ ಇದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಉದ್ಘಾಟನಾ ಕಾರ್ಯಕ್ರಮಕ್ಕೆ ಬಳಕೆಯಾದ KSRTC ಬಸ್ಸುಗಳೆಷ್ಟು? ಅವುಗಳ ಬಾಡಿಗೆ ಕಟ್ಟಿದ್ಯಾರು?
ಈತನ ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೇ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರನ್ನು ದೂರವಾಣಿ ಸಂಖ್ಯೆ : 08182-222974, 9480802124 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ರೈಲ್ವೆ ಸ್ಟೇಷನ್ ಸಬ್ ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200