ತುಂಗಾ ನದಿ ಸೇತುವೆ ಕೆಳಗೆ ಮೃತದೇಹ ಪತ್ತೆ ಕೇಸ್‌, ಪೊಲೀಸ್‌ ಇಲಾಖೆಯಿಂದ ಪ್ರಕಟಣೆ ರಿಲೀಸ್‌, ಏನಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 APRIL 2024

SHIMOGA : ತುಂಗಾ ನದಿಯ ರೈಲ್ವೆ ಸೇತುವೆ ಪಕ್ಕದಲ್ಲಿ ಸಿಕ್ಕಿ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಈ ಹಿನ್ನೆಲೆ ಪೊಲೀಸ್‌ ಇಲಾಖೆ ಪ್ರಕಟಣೆ ಹೊರಡಿಸಿದೆ.

ಏ.13 ರಂದು ಹೊಳೆ ಬಸ್ ಸ್ಟಾಪ್‌ ರೈಲ್ವೆ ಸೇತುವೆ ಕೆಳಗೆ ತುಂಗಾ ನದಿಯಲ್ಲಿ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯು ಮೃತಪಟ್ಟಿದ್ದಾನೆ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈತ ಸುಮಾರು 5.02 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ ಹೊಂದಿದ್ದು, ತಲೆಯಲ್ಲಿ 2 ಇಂಚು ಉದ್ದದ ಕಪ್ಪು ಕೂದಲು ಹಾಗೂ ಕುರುಚಲು ಗಡ್ಡ ಇದೆ. ಮೃತನ ಮೈಮೇಲೆ ತಿಳಿಹಸಿರು ತಿಳಿಕೇಸರಿ  ಮಿಶ್ರಿತ ಬಣ್ಣದ ತುಂಬುತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದಾನೆ. ಈತನ ವಾರಸುದಾರರು ಪತ್ತೆಯಾದಲ್ಲಿ ಕೋಟೆ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ – ವಿಐಎಸ್‌ಎಲ್‌ನ ಅಧಿಕಾರಿ ಶಿವಮೊಗ್ಗದ ಸಂಸದರಾಗಿದ್ದರು, ಹೇಗದು?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment