SHIVAMOGGA LIVE NEWS | 16 MARCH 2023
SHIMOGA : ಮಹಾದೇವಿ ಟಾಕೀಸ್ ಸಮೀಪ ರೈಲ್ವೆ ಹಳಿ (Railway Track) ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರಿಗೆ ತೆರಳುತ್ತಿದ್ದ ಜನ ಶತಾಬ್ದ ರೈಲಿನ ಲೋಕೋ ಪೈಲೆಟ್ ಅವರು, ಹಳಿಗಳ (Railway Track) ಮೇಲೆ ಮೃತದೇಹ ಇರುವುದನ್ನು ಗಮನಿಸಿ, ನಿಲ್ದಾಣಕ್ಕೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೃತನ ಗುರುತು ಪತ್ತೆಯಾಗಿಲ್ಲ. ಅಂದಾಜು 50 – 55 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, ಬಲಗೈ ಮೇಲೆ ವಿ ಮತ್ತು ಅಂಜನೇಯ ಸ್ವಾಮಿಯ ಹಚ್ಚೆ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗದ ಲಕ್ಷ್ಮಿ ಟಾಕೀಸ್ ಇನ್ನು ನೆನಪಷ್ಟೇ, ಟಾಕೀಸ್ ಬಗ್ಗೆ ನಿಮಗೆಷ್ಟು ಗೊತ್ತು? ಮುಂದೇನಾಗುತ್ತೆ ಇಲ್ಲಿ?
ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಸಂಬಂಧಿಕರು ಇದ್ದಲ್ಲಿ ರೈಲ್ವೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾಹಿತಿಗೆ 08182 222974 ಸಂಪರ್ಕಿಸಬಹುದಾಗಿದೆ.