ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022
ಶಿವಮೊಗ್ಗ ಭದ್ರಾವತಿ ನಡುವೆ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇವರ ಗುರುತು ಪತ್ತೆಯಾಗದ ಹಿನ್ನೆಲೆ, ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತರು 60 ರಿಂದ 65 ವರ್ಷದವರಾಗಿದ್ದಾರೆ. ಪರ್ಪಲ್ ಬಣ್ಣದ ಪೂರ್ತಿ ತೋಳಿನ ಶರ್ಟ್, ಬೂದು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. 5.5 ಅಡಿ ಎತ್ತರವಿದ್ದಾರೆ ಎಂದು ರೈಲ್ವೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಭದ್ರಾವತಿ ನಡುವಿನ ರೈಲ್ವೆ ಕಿ.ಮೀ ನಂ 55/500ರಲ್ಲಿ ಮೃತದೇಹ ಪತ್ತೆಯಾಗಿದೆ. ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿಗೆ 08182 222974 ನಂಬರ್’ಗೆ ಸಂಪರ್ಕಿಸಬಹುದು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422