ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021
ಬಾರ್ ಮುಂದೆ ಮಲಗಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಗುರುತು ಪತ್ತೆಯಾಗಿಲ್ಲ. ಪೊಲೀಸರು ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಳೆ ಬಸ್ ಸ್ಟಾಪ್ ಬಳಿ ಶಂಕರ ಮಠ ಹಿಂಭಾಗದ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಬಾರ್ ಒಂದರ ಮುಂದೆ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಆತನ ಗುರುತು ಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟಿರುವ ಶಂಕೆ ಮೇರೆಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಆತ ಮೃತಪಟ್ಟಿರುವುದು ದೃಢಪಟ್ಟಿದೆ. ಕೂಡಲೆ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಯಿತು. ಮದ್ಯ ಸೇವಿಸಿ ಬಂದು ಮಲಗಿದ್ದಾಗ ಮೃತಪಟ್ಟಿರುವ ಬಗ್ಗೆ ಶಂಕೆ ಇದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200