SHIVAMOGGA LIVE NEWS | 24 MARCH 2023
SHIMOGA : ವಿಧಾನಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ವತಿಯಿಂದ ಚೆಕ್ ಪೋಸ್ಟ್ (Election Checkpost) ಸ್ಥಾಪಿಸಿ, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಮತ್ತು ಸಂಗ್ರಹಿಸಿಟ್ಟಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಎಲ್ಲೆಲ್ಲಿ ಏನೇನು ಸಿಕ್ಕಿದೆ?
ಆಗುಂಬೆ ಪೊಲೀಸ್ ಠಾಣೆ : ಮಾರ್ಚ್ 22ರಂದು ವಾಹನ ತಪಾಸಣೆ (Election Checkpost) ವೇಳೆ ಲಾರಿಯೊಂದರಲ್ಲಿ ಸಾಗಿಸುತ್ತಿದ್ದ 1100 ನಾನ್ ಸ್ಟಿಕ್ ದೋಸಾ ತವಾಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 29.70 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿನೋಬನಗರ ಠಾಣೆ : ಮಾ.22ರಂದು ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಸಾಗಿಸುತ್ತಿದ್ದ 30 ಟನ್ ತೂಕದ ಬೇಳೆ, ರವೆ, ಗೋಧಿ ಮತ್ತು ಆಹಾರ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ. ಒಂದು ಸಾವಿರ ಬ್ಯಾಗ್ ಗಳಲ್ಲಿ ಆಹಾರ ಸಾಮಗ್ರಿ ಸಾಗಿಸಲಾಗುತ್ತಿತ್ತು. ಇದರ ಅಂದಾಜು ಮೌಲ್ಯ 8 ಲಕ್ಷ ರೂ. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೋಟೆ ಠಾಣೆ : ಮಾ.22ರಂದು ಸೂಕ್ತ ದಾಖಲೆ ಇಲ್ಲದೆ ಲಾರಿಯಲ್ಲಿ ಸಾಗಿಸುತ್ತಿದ್ದ 7 ಲಕ್ಷ ರೂ. ಮೌಲ್ಯದ 10 ಟನ್ 504 ಕೆ.ಜಿ ಅಕ್ಕಿಯನ್ನು ವಶಕ್ಕೆ ಪಡೆಲಾಗಿದೆ. 404 ಚೀಲಗಳಲ್ಲಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು.
ದೊಡ್ಡಪೇಟೆ ಠಾಣೆ : ಮಾ.22ರಂದು ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಂಗ್ರಹಿಸಿಟ್ಟಿದ್ದ 10 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬಟ್ಟೆ, ಸೀರೆ, ಇಡ್ಲಿ ಕುಕ್ಕರ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – GOOD NEWS | ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್?
ಅಕ್ರಮ ಮದ್ಯ : ಜಿಲ್ಲೆಯಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾ.22ರಂದು ದಾಳಿ ನಡೆಸಿ 17,507 ರು. ಮೌಲ್ಯದ 25 ಲೀಟರ್ 608 ಮಿಲಿ ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ 8 ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.