ಶಿವಮೊಗ್ಗದ ವಿದ್ಯಾನಗರದಲ್ಲಿ ಯುವಕನ ಮೇಲೆ ಹರಿದ ಲಾರಿ

ಶಿವಮೊಗ್ಗ: ಹೆದ್ದಾರಿಯಲ್ಲಿ ಲಾರಿ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಲಾರಿ ನಿಲ್ಲಿಸದೆ ಪರಾರಿಯಾಗಿದೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ವಿದ್ಯಾನಗರದ ಎಸ್‌ಬಿಐ ಬ್ಯಾಂಕ್‌ ಮುಂಭಾಗ ಇಂದು ಸಂಜೆ ಘಟನೆ ಸಂಭವಿಸಿದೆ. ಮೃತರನ್ನ ಮಣಿ (21) ಎಂದು ಗುರುತಿಸಲಾಗಿದೆ. ಬೈಕ್‌ ಹಿಂಭಾಗ ನಜ್ಜುಗುಜ್ಜಾಗಿದೆ. ಟಿಲ್ಲರನ್ನು ಬೈಕ್‌ ಓವರ್‌ ಟೇಕ್‌ ಮಾಡುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನು, ಅಪಘಾತದ ಬಳಿ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೂರ್ವ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಯದ್ವಾತದ್ವ ಚಲಿಸಿದ ಸಿಟಿ ಬಸ್‌, ನವ ವಿವಾಹಿತ ಸಾವು, ಬೈಕುಗಳು ಜಖಂ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Vidyanagara-Truck-and-Bike-incident - ಲಾರಿ

Leave a Comment