ಬೆಕ್ಕು ಅರೆಸ್ಟ್‌: ಮೂರೇ ದಿನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸ್‌, ಏನಿದು ಕೇಸ್?

ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಮೂರು ದಿನಗಳಲ್ಲಿ ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ₹6.04 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಬೊಮ್ಮನಕಟ್ಟೆ ಡಿ ಬ್ಲಾಕ್ ನಿವಾಸಿ ರಾಮು.ಜಿ ಎಂಬುವವರು ಜೂನ್ 12ರಿಂದ 17ರ ನಡುವೆ ಮನೆಗೆ ಬೀಗ ಹಾಕಿ ಹೋಗಿದ್ದಾಗ, ಕಳ್ಳರು ಬಾಗಿಲು ಮುರಿದು ಒಳನುಗ್ಗಿದ್ದರು. ಮನೆಯಲ್ಲಿದ್ದ ಬಂಗಾರದ ಆಭರಣ, ಬೆಳ್ಳಿ ವಸ್ತು ಹಾಗೂ ನಗದು ಕಳವು ಮಾಡಲಾಗಿತ್ತು. ಈ ಕುರಿತು ಜೂನ್ 17ರಂದು ರಾಮು ಅವರು ದೂರು ನೀಡಿದ್ದರು.

inobanagara-Police-arrest-Two-thieves.

ಬೆಕ್ಕು ಸೇರಿ ಇಬ್ಬರು ಅರೆಸ್ಟ್

ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್.ಬಿ, ಹೆಚ್ಚುವರಿ ಎಸ್‌ಪಿ ಕಾರಿಯಪ್ಪ.ಎ.ಜಿ, ಡಿವೈಎಸ್‌ಪಿ ಸಂಜೀವ್ ಕುಮಾರ್ ಮಾರ್ಗದರ್ಶನದಲ್ಲಿ ವಿನೋಬನಗರ ಠಾಣೆ ಇನ್ಸ್‌ಪೆಕ್ಟರ್ ಸಂತೋಷಕುಮಾರ್ ಡಿ.ಕೆ. ಉಸ್ತುವಾರಿಯಲ್ಲಿ ಪಿಎಸ್‌ಐ ತಿರುಮಲೇಶ್ ಹಾಗೂ ಸಿಬ್ಬಂದಿಯ‌ ವಿಶೇಷ ತಂಡ ರಚಿಸಲಾಗಿತ್ತು.

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ರವಿ ಅಲಿಯಾಸ್ ಬೆಕ್ಕು ಅಲಿಯಾಸ್ ರವಿನಾಯ್ಕ್ (27) ಮತ್ತು ಗಣೇಶ್ ಅಲಿಯಾಸ್ ಗಣಿ (26) ಎಂಬುವವರನ್ನು ಬಂಧಿಸಿದೆ. ಬಂಧಿತರಿಂದ ₹6 ಲಕ್ಷ ಮೌಲ್ಯದ 51 ಗ್ರಾಂ ಚಿನ್ನಾಭರಣ ಹಾಗೂ ₹4,000 ಮೌಲ್ಯದ ಬೆಳ್ಳಿಯ ಕಾಲುಬಳೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣಯಲ್ಲಿ ಪೊಲೀಸ್‌ ಸಿಬ್ಬಂದಿ ರಾಜು.ಕೆ.ಆರ್, ಮಲ್ಲಪ್ಪ.ಎಸ್.ಜಿ, ಅರುಣಕುಮಾರ್.ಎನ್.ಕೆ, ಮನುಶಂಕರ ಭಾಗವಹಿಸಿದ್ದರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion