SHIVAMOGGA LIVE NEWS | 9 MAY 2024
THIRTHAHALLI : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಟ್ಟಡವೊಂದರ ನೆಲಮಾಳಿಗೆಗೆ ಬಿದ್ದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ತೀರ್ಥಹಳ್ಳಿ ಪಟ್ಟಣದ ಅಂಗುಬೆ ರಸ್ತೆಯ ಛತ್ರಕೇರಿ ಮಾರ್ಗದಲ್ಲಿ ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಕರ್ನಾಟಕ ಬ್ಯಾಂಕ್ ಕಟ್ಟಡದ ನೆಲ ಮಾಳಿಗೆಗೆ ನುಗ್ಗಿದೆ. ಗಜಾನನ ಟೆಕ್ಸ್‌ಟೈಲ್ಸ್ ಅಂಗಡಿ ಮುಂಭಾಗ ಉರುಳಿದೆ. ಇದೇ ವೇಳೆ ಬೈಕ್ ಒಂದಕ್ಕೆ ಕಾರು ಡಿಕ್ಕಿಯಾಗಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಇದರ ಹೊರತು ಯಾರಿಗೂ ಯಾವುದೇ ಸಮಸ್ಯೆಯಾಗಿಲ್ಲ. ತೀರ್ಥಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ:
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಷಾ
ಇದನ್ನೂ ಓದಿ – ಕೋರ್ಟ್ ಮೊರೆ ಹೋದ ಈಶ್ವರಪ್ಪ, ಜಯನಗರ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ, ಏನಿದು ಕೇಸ್?


