ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 DECEMBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗಾಂಜಾ ಸೇವನೆ ದೃಢ, ಮೂವರು ಅರೆಸ್ಟ್
SHIMOGA : ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಸೇವಿಸಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗೋಪಾಳದ ಸಮೀಪದ ದ್ರೌಪದಮ್ಮ ಸರ್ಕಲ್ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬೊಮ್ಮನಕಟ್ಟೆಯ ಅಬ್ದುಲ್ ಮುನಾಫ್ ಅಲಿಯಾಸ್ ಮುನ್ನಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಟಿಪ್ಪುನಗರ ಚಾನಲ್ ಸಮೀಪ ಅಬ್ದುಲ್ ಸುಬಾನ್, ಅನುಪಿನಕಟ್ಟೆ ಚಾನಲ್ ಸಮೀಪ ನಿತೇಶ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮೂವರು ಗಾಂಜಾ ಸೇವಿಸಿರುವ ಅನುಮಾನ ವ್ಯಕ್ತವಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷಿಸಲಾಯಿತು. ಗಾಂಜಾ ಸೇವನೆ ದೃಢವಾದ ಹಿನ್ನೆಲೆ ಆರೋಪಿಗಳನ್ನು ಬಂಧಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆ
SHIMOGA : ಟಿಪ್ಪು ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳ್ಳತನವಾಗಿದೆ. ಮುಷ್ತಕ್ ಅಹಮದ್ ಅವರು ನ.16ರಂದು ತಮ್ಮ ಮನೆ ಮುಂದೆ ಬೈಕ್ ನಿಲ್ಲಿಸಿದ್ದರು. ಮರು ದಿನ ಬೆಳಗ್ಗೆ ಎದ್ದು ನೋಡಿದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದ ಬಳಿಕ ಮುಷ್ತಾಕ್ ಅಹಮದ್ ಅವರು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ –BREAKING NEWS – ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಭೀಕರ ಅಪಘಾತ, ನಜ್ಜುಗುಜ್ಜಾದ ಫಾರ್ಚುನರ್
ಕಾರ್ಮಿಕರಿಗೆ ಗಂಭೀರ ಗಾಯ
SHIMOGA : ಹಳೆಯ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಅಶೋಕ ನಗರದ ಸಯ್ಯದ್ ಅಫ್ಸರ್ ಮತ್ತು ಇಂದಿರಾ ನಗರದ ಬಾಬಾಜಾನ್ ಗಾಯಾಳುಗಳು. ಮಾಚೇನಹಳ್ಳಿಯಲ್ಲಿ ವುಡ್ ಅಂಡ್ ಸಾಮಿಲ್ನ ಹಳೆಯ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಘಟನೆ ಸಂಭವಿಸಿದೆ. ಕೂಡಲೆ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ತೆರವು ಕಾರ್ಯ ನಡೆಸಿದ ಆರೋಪದ ಹಿನ್ನೆಲೆ ಕಟ್ಟಡದ ಮಾಲೀಕ, ಮೇಸ್ತ್ರಿ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.