ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 4 ಜನವರಿ 2020
ವೆಲ್ಡಿಂಗ್ ಶಾಪ್’ನವರ ನಿರ್ಲಕ್ಷ್ಯಕ್ಕೆ ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಬಾಲಕ ಬಲಿಯಾಗಿದ್ದಾನೆ. ಕುತ್ತಿಗೆ ಮೇಲೆ ರಾಡ್ ಬಿದ್ದು ಎಂಟು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಯುವರಾಜ್ (8) ಮೃತ ಬಾಲಕ. ಮನೆಯಿಂದ ಅಂಗಡಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಹೊಸಮನೆ ಬಡಾವಣೆಯ ಚಾನಲ್ ಏರಿಯಾದಲ್ಲಿರುವ ವೆಂಕಟೇಶ್ವರ ಇಂಡಸ್ಟ್ರೀಸ್ ವೆಲ್ಡಿಂಗ್ ಶಾಪ್’ನವರು, ದೊಡ್ಡದೊಂಡು ರಾಡ್’ಗೆ ಬಣ್ಣ ಹಚ್ಚುತ್ತಿದ್ದರು. ಈ ವೇಳೆ ರಾಡ್ ಜಾರಿ, ದಾರಿಯಲ್ಲಿ ಹೋಗುತ್ತಿದ್ದ ಯುವರಾಜ್ ಮೇಲೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.
ಕೂಡಲೇ ಯುವರಾಜ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದರಿಂದ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಯುವರಾಜ್ ಕೊನೆಯುಸಿರೆಳೆದಿದ್ದಾನೆ. ಒಂದು ವರ್ಷದ ಹಿಂದೆ ಯುವರಾಜನ ತಂದೆ ತೀರಿಕೊಂಡಿದ್ದರು. ತಾಯಿ ಅಂಬಿಕಾ ಬೇರೆಯವರ ಮನೆಯಲ್ಲಿ ಕೆಲಸ ಮಾಡಿ, ಮಗನನ್ನು ಬೆಳೆಸುತ್ತಿದ್ದರು. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422