ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 MARCH 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಯುವತಿಯೊಬ್ಬಳ ಹೆಸರಿನಲ್ಲಿ ಅಪರಿಚಿತ ಮೊಬೈಲ್ ನಂಬರ್‌ನಿಂದ ವಾಟ್ಸಪ್ ಗ್ರೂಪ್ ಮತ್ತು ಇನ್‌ಸ್ಟಾಗ್ರಾಂ ಖಾತೆ ಕ್ರಿಯೇಟ್ ಮಾಡಿ ಆಕೆಯ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅಪ್‌ಲೋಡ್ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಕಿಗೆ ಬಂದಿದ್ದು ಹೇಗೆ?
ಶಿವಮೊಗ್ಗ ಜಿಲ್ಲೆಯ ಯುವತಿಯೊಬ್ಬಳ (ಹೆಸರು, ಊರು ಗೌಪ್ಯ) ಹೆಸರಿನಲ್ಲಿ ಅಪರಿಚಿತ ನಂಬರ್‌ನಿಂದ ವಾಟ್ಸಪ್ ಗ್ರೂಪ್ ಕ್ರಿಯೇಟ್ ಮಾಡಲಾಗಿದೆ. ಆಕೆಯ ಪರಿಚಿತರನ್ನು ಗ್ರೂಪ್‌ಗೆ ಸೇರಿಸಲಾಗಿದೆ. ಆಕೆಯ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಗ್ರೂಪ್‌ನಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಲಾಗಿದೆ. ಗ್ರೂಪ್‌ನಲ್ಲಿದ್ದ ಆಕೆಯ ಸ್ನೇಹಿತರು ಕರೆ ಮಾಡಿ ವಿಚಾರ ತಿಳಿಸಿದ್ದರು. ಇನ್ನು, ಇನ್‌ಸ್ಟಾಗ್ರಾಂನಲ್ಲಿಯು ಆಕೆಯ ಹೆಸರಿನಲ್ಲಿ ಖಾತೆ ಸೃಷ್ಟಿಸಿ, ಎಡಿಟ್ ಮಾಡಿದ ಫೋಟೊ ಅಪ್‌ಲೋಡ್ ಮಾಡಿ, ಅಶ್ಲೀಲ ಮೆಸೇಜ್ ಮತ್ತು ಆಕೆಯ ಮೊಬೈಲ್ ನಂಬರ್ ಪ್ರಕಟಿಸಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದಾಗ ವಿಷಯ ಬೆಳಕಿಗೆ ಬಂದಿದೆ.
ಸಿಕ್ಕಿಬಿದ್ದರೆ ಜೈಲು ಗ್ಯಾರಂಟಿ
ಕೃತ್ಯ ಎಸಗಿದಾತನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅನುಮತಿ ಇಲ್ಲದೆ ಪೋಟೊ ಬಳಕೆ ಅಪರಾಧ. ಯಾರದ್ದೋ ಫೋಟೊ ಬಳಕೆ, ನಕಲಿ ಖಾತೆಗಳನ್ನು ಸೃಷ್ಟಿಸುವಂತಿಲ್ಲ. ಕಾಯ್ದೆ ಸೆಕ್ಷನ್ 66 ಸಿ, 66 ಡಿ, 67 ಎ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಮಹಿಳೆಯರೆ ಹುಷಾರ್, ನಡು ರಸ್ತೆಯಲ್ಲಿ ನಿಮಗೂ ಸಿಗಬಹುದು ಈ ನಯ ವಂಚಕರು, ಕೇಸ್ ದಾಖಲು
ಆರೋಪ ಸಾಬೀತಾದಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿದವನಿಗೆ ಸೆಕ್ಷನ್ 66ಸಿ ಅಡಿ ಮೂರು ವರ್ಷ ಜೈಲು ಮತ್ತು ಒಂದು ಲಕ್ಷ ರೂ.ವರೆಗೆ ದಂಡ ಮತ್ತು 66 ಡಿ ಅಡಿ ಮೂರು ವರ್ಷ ಜೈಲು, ಒಂದು ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಐಟಿ ಕಾಯ್ದೆ ಸೆಕ್ಷನ್ 67 ಅಡಿ ಆರೋಪ ಸಾಬೀತಾದಲ್ಲಿ ಮೂರು ವರ್ಷ ಜೈಲು ಮತ್ತು ಐದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ.