ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯ ಉಪನ್ಯಾಸಕಿ ಒಬ್ಬರಿಗೆ (ಹೆಸರು, ಗುರುತು ಗೌಪ್ಯ) ಅಪರಿಚಿತನೊಬ್ಬ ವಾಟ್ಸಾಪ್ ವಿಡಿಯೋ ಕರೆ (Video Call) ಮೂಲಕ ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ.
ಉಪನ್ಯಾಸಕಿಯ ಮೊಬೈಲ್ ಸಂಖ್ಯೆಗೆ ರಾತ್ರಿ ಸಮಯದಲ್ಲಿ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಸತತವಾಗಿ ವಿಡಿಯೋ ಕರೆಗಳನ್ನು ಮಾಡಲಾಗಿದೆ. ಆರಂಭದಲ್ಲಿ ಎರಡು ಬಾರಿ ಕರೆ ಸ್ವೀಕರಿಸಿದಾಗ ವ್ಯಕ್ತಿಯ ಮುಖ ಸ್ಪಷ್ಟವಾಗಿ ಕಾಣಿಸಿರಲಿಲ್ಲ. ಮೂರನೆ ಬಾರಿ ಕರೆಯನ್ನು ಉಪನ್ಯಾಸಕಿ ತಮ್ಮ ಮೊಬೈಲ್‌ನಲ್ಲಿ ಸ್ಕ್ರೀನ್ ರೆಕಾರ್ಡ್ ಆನ್ ಮಾಡಿಕೊಂಡು ಸ್ವೀಕರಿಸಿದ್ದಾರೆ. ಈ ವೇಳೆ ಅಪರಿಚಿತನು ತನ್ನ ಖಾಸಗಿ ಅಂಗ ತೋರಿಸಿ ಅಶ್ಲೀಲವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಜೈಲು, ಲಕ್ಷ ಲಕ್ಷ ದಂಡ ಫಿಕ್ಸ್
ಈ ಸಂಬಂಧ ಶಿವಮೊಗ್ಗದ ಸಿಇಎನ್ (CEN) ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 67 ಮತ್ತು 67A ಅಡಿಯಲ್ಲಿ ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯ ಪ್ರಸಾರ ಮಾಡಿದ ಆರೋಪ ಸಾಬೀತಾದರೆ, ಮೊದಲನೇ ಬಾರಿ ಅಪರಾಧಕ್ಕೆ 3 ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ರಿಂದ 10 ಲಕ್ಷ ರೂಪಾಯಿವರೆಗೆ ದಂಡ ವಿಧಿಸಲು ಅವಕಾಶವಿದೆ. ಇದರೊಂದಿಗೆ, ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 75(1)(3) ಅಡಿಯಲ್ಲಿ ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ಪ್ರದರ್ಶನದ ಆರೋಪ ದೃಢಪಟ್ಟರೆ, ಆರೋಪಿಗೆ ಗರಿಷ್ಠ 3 ವರ್ಷ ಕಠಿಣ ಜೈಲು ಶಿಕ್ಷೆ ಅಥವಾ ದಂಡ, ಅಥವಾ ಎರಡನ್ನೂ ಏಕಕಾಲಕ್ಕೆ ವಿಧಿಸಬಹುದಾಗಿದೆ.
ಇದನ್ನೂ ಓದಿ – ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?


LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು















