ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಬಿ.ಹೆಚ್. ರಸ್ತೆಯ ಬ್ಲೂ ಮೂನ್ ಬಾರ್ ಮುಂಭಾಗ ನಿಲ್ಲಿಸಿದ್ದ ಹೋಂಡಾ ಆಕ್ಟಿವಾ ಬೈಕ್ ಕಳ್ಳತನವಾಗಿದೆ. ಉದ್ಯಮಿ ಮಂಜುನಾಥ್ ಎಂಬುವವರಿಗೆ ಸೇರಿದ ಬೈಕ್ ಕಳುವಾಗಿದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಮಂಜುನಾಥ್ ಅವರು ಸಂಜೆ 4.30ರ ಹೊತ್ತಿಗೆ ತಮ್ಮ ಬಿಳಿ ಬಣ್ಣದ ಹೋಂಡಾ ಆಕ್ಟಿವಾ ಬೈಕ್ ಅನ್ನು ಬ್ಲೂ ಮೂನ್ ಬಾರ್ ಮುಂಭಾಗ ನಿಲ್ಲಿಸಿ ತೆರಳಿದ್ದರು. ರಾತ್ರಿ 10 ಗಂಟೆಗೆ ವಾಪಸ್ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ನಂತರ ಮಂಜುನಾಥ್ ಅವರು ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
