ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮಹಿಳೆಯರ (Woman) ವಿಶ್ರಾಂತಿ ಕೊಠಡಿಯಲ್ಲಿ ಕುಳಿತಿದ್ದ ರಾಣೇಬೆನ್ನೂರಿನ ರೇಣುಕಮ್ಮ ಎಂಬುವವರ ಮೇಲೆ ಮಹಿಳೆಯೊಬ್ಬಳು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ರೇಣುಕಮ್ಮ ಅವರ ವ್ಯಾನಿಟಿ ಬ್ಯಾಗಿನಲ್ಲಿದ್ದ ₹1000 ನಗದು ಕಸಿದುಕೊಂಡಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ರೇಣುಕಮ್ಮ ತಮ್ಮ ಪತಿಯೊಂದಿಗೆ ಹಣಗೆರೆ ಕಟ್ಟೆಗೆ ತೆರಳಬೇಕಿತ್ತು. ರಾತ್ರಿ ರೇಣುಕಮ್ಮ ಮತ್ತು ಪತಿ ಬಸ್ ನಿಲ್ದಾಣದಕ್ಕೆ ಬರುವಷ್ಟರಲ್ಲಿ ಖಾಸಗಿ ಬಸ್ಸು ಹೋಗಿತ್ತು. ಹಾಗಾಗಿ ಕೆಎಸ್‌ಆರ್‌ಟಿಸಿ ನಿಲ್ದಾಣದ ಮಹಿಳೆಯರ ವಿಶ್ರಾಂತಿ ಜಾಗದಲ್ಲಿ ಕುಳಿತಿದ್ದರು. ಅಲ್ಲಿಯೆ ನಿದ್ರೆ ಮಾಡಿದ್ದ ರೇಣುಕಮ್ಮ ಅವರ ಮೇಲೆ ರಾತ್ರಿ 11.45ರ ಹೊತ್ತಿಗೆ ಮಹಿಳೆಯೊಬ್ಬಳು ದೊಣ್ಣೆಯಿಂದ ಹೊಡೆದಿದ್ದಾರೆ. ಎಚ್ಚರವಾದಾಗ ಆಕೆ ಅವಾಚ್ಯವಾಗಿ ನಿಂದಿಸುತ್ತಿದ್ದರು ಎಂದು ಆರೋಪಿಸಲಾಗಿದೆ.
ಹಲ್ಲೆ ನಡೆಸಿದ ಮಹಿಳೆ ರೇಣುಕಮ್ಮ ಅವರ ವ್ಯಾನಿಟಿ ಬ್ಯಾಗ್‌ನಿಂದ ಹಣವನ್ನು ಕಸಿದುಕೊಂಡಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಹಾಪ್‌ಕಾಮ್ಸ್‌ಗೆ 15 ನಿರ್ದೇಶಕರು ಅವಿರೋಧ ಆಯ್ಕೆ, ವಿಜಯ್‌ಕುಮಾರ್ ಹ್ಯಾಟ್ರಿಕ್ ಸಾಧನೆ
Woman
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






