ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 JUNE 2024
SHIMOGA : ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಮಹಿಳೆಗೆ (Woman) ಇರಿದು ಹತ್ಯೆಗೆ ಯತ್ನಿಸಿದ್ದಾನೆ. ಶಿವಮೊಗ್ಗ ತಾಲೂಕು ವಡ್ಡಿನಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವನಾಯ್ಕ್ (35) ಎಂಬಾತ ಕೆಲಸದ ಸ್ಥಳದಲ್ಲಿ ಪರಿಚಯವಾಗಿದ್ದ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಶಿವನಾಯ್ಕ್‌ಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮಹಿಳೆ ಕೂಡ ಮದುವೆಯಾಗಿದ್ದರು. ಈಚೆಗೆ ಅನೈತಿಕ ಸಂಬಂಧ ಬಹಿರಂಗವಾಗಿ ಹಿರಿಯರು ಬುದ್ಧಿವಾದ ಹೇಳಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮಹಿಳೆ ಶಿವನಾಯ್ಕ್‌ನನ್ನು ದೂರ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಮತ ಚಲಾಯಿಸಿ ಕೊಠಡಿಯಿಂದ ಹೊರ ಬಂದ ಉದ್ಯಮಿಗೆ ಕಾದಿತ್ತು ಆಘಾತ
ಆಕ್ರೋಶಗೊಂಡ ಶಿವನಾಯ್ಕ್, ಸೋಮವಾರ ವಡ್ಡಿನಕೊಪ್ಪದ ಮಹಿಳೆಯ ಮನೆಗೆ ನುಗ್ಗಿ ಆಕೆಯ ಮೇಲೆ ಚೂಪಾದ ವಸ್ತುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





