ಶಿವಮೊಗ್ಗ: ಟಿಪ್ಪು ನಗರದಲ್ಲಿ ಯುವಕನೊಬ್ಬ ವೃದ್ಧೆಯ (woman) ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾನೆ. 62 ವರ್ಷದ ಮಹಿಳೆ (ಹೆಸರು ಗೌಪ್ಯ) ಹಲ್ಲೆಗೊಳಗಾಗಿದ್ದಾರೆ.
ಮಾರ್ಚ್ 27ರಂದು ಬೆಳಗ್ಗೆ ಸುಮಾರು 5 ಗಂಟೆಗೆ ವೃದ್ಧೆ ಶೌಚಾಲಯದಿಂದ ಹೊರಗೆ ಬಂದಾಗ ಹಿಂಬದಿಯಿಂದ ಬಂದ ಯುವಕನೊಬ್ಬ ವೃದ್ಧೆಯ ಕೈಗಳನ್ನು ಹಿಡಿದುಕೊಂಡಿದ್ದಾನೆ. ವೃದ್ಧೆಯ ಬಾಯಿ ಮುಚ್ಚಿ ಹಲ್ಲೆ ಮಾಡಿದ್ದಾನೆ. ಪ್ರತಿರೋಧ ವ್ಯಕ್ತಪಡಿಸಿ ಯುವಕನ ಕೈಗೆ ಕಚ್ಚಿದಾಗ, ಕೆರಳಿದ ಆತ ವೃದ್ಧೆಯ ಮುಖಕ್ಕೆ ಗುದ್ದಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ವೃದ್ಧೆಯ ಎರಡು ಹಲ್ಲುಗಳು ಮುರಿದಿವೆ, ಬಾಯಿ ಮತ್ತು ಮೂಗಿನಿಂದ ತೀವ್ರ ರಕ್ತಸ್ರಾವವಾಗಿದೆ. ಆತ ವೃದ್ಧೆಯ ಕುತ್ತಿಗೆ ಹಿಸುಕಿ ಸಾಯಿಸಲು ಯತ್ನಿಸಿದ್ದಾನೆ. ಈ ವೇಳೆ ವೃದ್ಧೆ ಜೋರಾಗಿ ಕೂಗಿದಾಗ ಅಕ್ಕಪಕ್ಕದ ಮನೆಯವರು ಧಾವಿಸಿದ್ದಾರೆ. ಅಷ್ಟರಲ್ಲಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ