BHADRAVATHI : ನೀಲಗಿರಿ ಮರಗಳನ್ನು (Nilgiri Trees) ಕಡಿಯುವ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬಳನ್ನು (Woman) ಭದ್ರಾವತಿಯಲ್ಲಿ ಹತ್ಯೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಭರಮ ಸಾಗರದ ರೂಪಾ (30) ಮೃತ ಮಹಿಳೆ. ಆಕೆಯ ಸ್ನೇಹಿತ ಸಿಂಗಾರಿ (35) ಎಂಬಾತನೆ ಹತ್ಯೆ ಮಾಡಿದವನು.
ಭದ್ರಾವತಿ ತಾಲೂಕು ಸಂಕ್ಲೀಪುರದಲ್ಲಿ ಎಂಪಿಎಂನ ನೀಲಗಿರಿ ತೋಪಿನಲ್ಲಿ ಮರಗಳ ಕಡಿತಲೆಗೆ ರೂಪಾ ಬಂದಿದ್ದಳು. ಇಲ್ಲಿ ಸಿಂಗಾರಿ ಎಂಬಾತನ ಪರಿಚಯವಾಗಿತ್ತು. ಭಾನುವಾರ ತಡರಾತ್ರಿ ಸಿಂಗಾರಿ ಮತ್ತು ರೂಪಾ ಮಧ್ಯೆ ಗಲಾಟೆಯಾಗಿದೆ. ಸಿಂಗಾರಿಯು ರೂಪಾಳ ಕಾಲಿನಲ್ಲಿ ಒದ್ದು, ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದ ಆರೋಪಿಸಲಾಗಿದೆ.
‘ಹತ್ಯೆ ಮಾಡಿದವನನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ತಿಳಿಸಿದ್ದಾರೆ.
‘ರೂಪಾಳ ಪತಿ ಕೆಲ ವರ್ಷದ ಹಿಂದೆ ಮೃತಪಟ್ಟಿದ್ದಾರೆ. ಭದ್ರಾವತಿಯಲ್ಲಿ ನೀಲಗಿರಿ ಮರಗಳನ್ನು ಕಡಿಯುವ ಕೆಲಸದಲ್ಲಿ ರೂಪಾ ತೊಡಗಿಸಿಕೊಂಡಿದ್ದಳು. ಈ ವೇಳೆ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತನೊಂದಿಗೆ ಲೀವ್ ಇನ್ (Live In Relationship) ಸಂಬಂಧ ಹೊಂದಿದ್ದಳು. ಅದೇ ವ್ಯಕ್ತಿಯೇ ರೂಪಾಳ ಹತ್ಯೆ ಮಾಡಿದ್ದಾನೆʼ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ