ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕರ್ನಾಟಕ ಸಂಘದ ಎದುರಿಗೆ ಇರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ (Bank ATM) ಮಹಿಳೆಯೊಬ್ಬರಿಗೆ ನಂಬಿಸಿ ಹಣ ದೋಚಿರುವ ಘಟನೆ ನಡೆದಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವವರಿಗೆ GOOD NEWS, ಇಲ್ಲಿದೆ ಉತ್ತಮ ವೇತನದ ಉದ್ಯೋಗ
ಹೊಳೆಹೊನ್ನೂರಿನ ಶಿವಮ್ಮ ಎಂಬುವವರು ಹಣ ಬಿಡಿಸಲು ಎಟಿಎಂ ಕೇಂದ್ರಕ್ಕೆ ಹೋಗಿದ್ದರು. ಅಲ್ಲಿಯೇ ಇದ್ದ ಅಪರಿಚಿತ ವ್ಯಕ್ತಿಯೊಬ್ಬ ಹಣ ಬಿಡಿಸಿಕೊಡುವುದಾಗಿ ನಂಬಿಸಿದ್ದಾನೆ. ಆತನ ಮಾತು ನಂಬಿ ಮಹಿಳೆಯು ತನ್ನ ಎಟಿಎಂ ಕಾರ್ಡ್ ಹಾಗೂ ಪಿನ್ ನೀಡಿದ್ದಾರೆ.
ವ್ಯಕ್ತಿಯು ಹಣ ಬರುತ್ತಿಲ್ಲ ಎಂದು ಸುಳ್ಳು ಹೇಳಿ, ಮಹಿಳೆಗೆ ಅವರ ಕಾರ್ಡ್ ಬದಲಿಗೆ ಬೇರೊಂದು ಕಾರ್ಡ್ ನೀಡಿ ವಂಚಿಸಿದ್ದಾನೆ. ನಂತರ ಮಹಿಳೆಯು ಬ್ಯಾಂಕ್‌ಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಒಟ್ಟು ₹24,300 ಹಣ ಡ್ರಾ ಆಗಿರುವುದು ಬೆಳಕಿಗೆ ಬಂದಿದೆ. ಎಟಿಎಂ ಕಾರ್ಡ್ ಪರಿಶೀಲಿಸಿದಾಗ ಅದು ತಮ್ಮದಲ್ಲ ಎಂಬುದು ದೃಢಪಟ್ಟಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





