ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SORABA NEWS | 29 ಆಗಸ್ಟ್ 2021
ಗಂಟಲು ನೋವು ತಾಳಲಾರದೆ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುನೀತಾ ಕೋಟ್ಯಪ್ಪ (25) ನೇಣಿಗೆ ಶರಣಾದ ಮಹಿಳೆ.
ಸುನೀತಾ ಕೋಟ್ಯಪ್ಪ ಅವರು ಕೆಲ ಸಮಯದಿಂದ ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಹಾಗಾಗಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಆದರೆ ನೋವು ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ | ರಿಪ್ಪನ್ ಪೇಟೆ ಬಳಿ ಕಾಡಲ್ಲಿ ಯುವತಿ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಪ್ರಿಯಕರ ಸಾವು, ಘಟನೆಗೆ ಕಾರಣವಾಯ್ತಾ ಭದ್ರಾವತಿ ಯುವಕನ ಪರಿಚಯ?
ಸೊರಬ ತಾಲೂಕು ಆನವಟ್ಟಿಯ ನೆಹರೂ ನಗರದಲ್ಲಿ ಘಟನೆ ಸಂಭವಿಸಿದೆ. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422