ಶಿವಮೊಗ್ಗದ ಲೈವ್.ಕಾಂ | SAGARA NEWS | 11 ಫೆಬ್ರವರಿ 2022
ಪ್ರತಿಭಟನೆ ವೇಳೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಕುಂತಲಾ ಎಂಬುವವರು ಪ್ರತಿಭಟನೆ ವೇಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಕ್ಕಪಕ್ಕದಲ್ಲಿದ್ದವರು ಕೂಡಲೆ ಅವರನ್ನು ತಡದಿದ್ದಾರೆ. ಆದರೂ ಸ್ವಲ್ಪ ಪ್ರಮಾಣದ ಕ್ರಿಮಿನಾಶಕ ಸೇವಿಸಿದ್ದು, ಆಸ್ವಸ್ಥರಾಗಿದ್ದಾರೆ.
ಶಕುಂತಲಾ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪ್ರತಿಭಟನೆಗೆ ಕಾರಣವೇನು?
ಸಾಗರ ತಾಲೂಕು ಕೆಳದಿಯಲ್ಲಿ ಬ್ಯಾಂಕ್ ಮಿತ್ರರ ಸಂಘ, ಮಾನವ ಹಕ್ಕುಗಳ ಕ್ಷೇಮಾಭಿವೃದ್ಧಿ ಸಮಿತಿ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ದೀವರ ಯುವ ವೇದಿಕೆ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದೆ. ಗುರುವಾರದಿಂದ ಪ್ರತಿಭಟನೆ ಆರಂಭವಾಗಿತ್ತು.
‘ಬ್ಯಾಂಕ್ ಮಿತ್ರ’ ಯೋಜನೆ ಅಡಿ ಹೊರಗುತ್ತಿಗೆ ಆಧಾರದಲ್ಲಿ ಹಲವರನ್ನ ನೇಮಕ ಮಾಡಿಕೊಳ್ಳಲಾಗುತ್ತದೆ. ಈವರೆಗೂ ವಿಷನ್ ಇಂಡಿಯಾ ಸಂಸ್ಥೆ ವತಿಯಿಂದ ನೇಮಕ ಆಗಿದ್ದವರನ್ನು ಏಕಾಏಕಿ ಕೆಲಸದಿಂದ ಕೈಬಿಡಲಾಗಿದೆ. ಶಕುಂತಲಾ ಸೇರಿದಂತೆ ಕೆಲವರು ಕೆಲಸ ಕಳೆದುಕೊಂಡಿದ್ದರು.
ಹೊಸ ಕಂಪನಿ ಗುತ್ತಿಗೆ ಪಡೆದಿದ್ದು, ‘50 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕೆಲಸದಿಂದ ಕೈಬಿಟ್ಟಿದ್ದು ಮತ್ತು ಹಣಕ್ಕೆ ಬೇಡಿಕೆ ಇಟ್ಟಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು.
ಇವತ್ತು ಪ್ರತಿಭಟನೆ ಎರಡನೆ ದಿನಕ್ಕೆ ಕಾಲಿಟ್ಟಿತ್ತು. ಈ ವೇಳೆ ಶಕುಂತಲಾ ಅವರು ಕ್ರಿಮಿನಾಶಕ ಸೇವಿಸಿದ್ದಾರೆ. ಸದ್ಯ ಅವರ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ALSO, READ | About Shivamogga Live
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200