ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 NOVEMBER 2022
ಎನ್.ಆರ್.ಪುರ : ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು ಶಿವಮೊಗ್ಗದ ಮಹಿಳೆ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. (woman death)
ಶಿವಮೊಗ್ಗದ ಗೋಪಾಳದ ನಿವಾಸಿ ರತ್ನಮ್ಮ (56) ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮುತ್ತಿನಕೊಪ್ಪ ಸಮೀಪ ಕಿರು ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಎನ್.ಆರ್.ಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಎಂ ಸ್ಯಾಂಡ್ ತುಂಬಿಕೊಂಡ ಟಿಪ್ಪರ್ ಲಾರಿ ಎನ್.ಆರ್.ಪುರದ ಕಡೆಗೆ ತೆರಳುತ್ತಿತ್ತು.
ALSO READ – ಶಿವಮೊಗ್ಗದಲ್ಲಿ KSRTC ಬಸ್, ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ
ಲಾರಿ ಮತ್ತು ಬಸ್ಸು ಏಕಕಾಲಕ್ಕೆ ಕಿರು ಸೇತುವೆ ಮೇಲೆ ನುಗ್ಗಿದ್ದರಿಂದ ಅಪಘಾತ ಸಂಭವಿಸಿದೆ. ಗಾಯಾಗಳುಗಳಿಗೆ ಎನ್.ಆರ್.ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
(woman death)
ಆರು ತಿಂಗಳ ಹಿಂದ ಪಾರಾಗಿದ್ದ ರತ್ನಮ್ಮ
ಗೋಪಾಳದ ರತ್ನಮ್ಮ ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿವಮೊಗ್ಗದಿಂದ ಪ್ರತಿದಿನ ಬಸ್ಸಿನಲ್ಲಿ ಅಲ್ಲಿಗೆ ತೆರಳುತ್ತಿದ್ದರು. ಆರು ತಿಂಗಳ ಹಿಂದೆ ಶಿವಮೊಗ್ಗ ಎನ್.ಆರ್.ಪುರ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತದ ಸಂಭವಿಸಿತ್ತು. ಆ ಅಪಘಾತದಲ್ಲಿ ರತ್ನಮ್ಮ ಗಂಭೀರವಾಗಿ ಗಾಯಗೊಂಡಿದ್ದರು. ಈಗ ಅದೆ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ರತ್ನಮ್ಮ ಮೃತಪಟ್ಟಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422