ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | RIPPONPETE NEWS | 15 ಜುಲೈ 2021
ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರು, ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೂವರಿಗೆ ಗಾಯಗೊಂಡಿದ್ದಾರೆ.
ರಿಪ್ಪನ್‍ಪೇಟೆ ಸಮೀಪದ ವರನಹೊಂಡದ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಟಾಟಾ ಸುಮೊ ಪಲ್ಟಿಯಾಗಿದೆ. ಘಟನೆಯಲ್ಲಿ ನೀಲಮ್ಮ (60) ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರು ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‍ಪೇಟೆಗೆ ತೆರಳುತ್ತಿತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ರಿಪ್ಪನ್‍ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






