ಶಿವಮೊಗ್ಗದ ಮನೆಯಲ್ಲಿ ಹಚ್ಚಿದ್ದ ದೀಪ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021

ಆಕಸ್ಮಿಕವಾಗಿ ದೀಪ ಬಿದ್ದು ಬೆಂಕಿ ಹೊತ್ತುಕೊಂಡು ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯೊಬ್ಬರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಲಕ್ಷ್ಮಮ್ಮ (65) ಮೃತ ದುರ್ದೈವಿ. ವೆಂಕಟೇಶನಗರದ ಮನೆಯಲ್ಲಿ ಘಟನೆ ಸಂಭವಿಸಿದೆ.

ಬುಧವಾರ ರಾತ್ರಿ ಮನೆಯಲ್ಲಿ ಕರೆಂಟ್ ಇಲ್ಲದ ಕಾರಣ ದೀಪ ಹಚ್ಚಿಟ್ಟು ನಿದ್ರೆಗೆ ಜಾರಿದ್ದರು. ಆಕಸ್ಮಿಕವಾಗಿ ದೀಪ ಬಿದ್ದು ಲಕ್ಷ್ಮಮ್ಮ ಅವರ ಸೀರೆಗೆ ಬೆಂಕಿ ಹೊತ್ತುಕೊಂಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಮ್ಮ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

LifeSpring%2BKan%2B02

ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮಮ್ಮ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : September 17, 2021 at 8:48 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 17, 2021

Leave a Comment