ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 NOVEMBER 2020
ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಕಾಣೆಯಾಗಿದ್ದ ಮಹಿಳೆಯ ಶವ ಮಾಲತಿ ನದಿಯಲ್ಲಿ ಪತ್ತೆಯಾಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಮೃತರನ್ನು ಮಧುರಾ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಮಧುರಾ, ಲಾಕ್ಡೌನ್ ವೇಳೆ ತವರು ಶಿರೂರು ಗ್ರಾಮದ ಜಾವಗಲ್ಗೆ ಬಂದಿದ್ದರು.
ಶನಿವಾರ ತೋಟಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದ ಮಧುರಾ ಕಾಣೆಯಾಗಿದ್ದರು. ಸೋಮವಾರ ಸಂಜೆ ಮಧುರಾ ಅವರ ಮೃತದೇಹ ಮಾಲತಿ ನದಿಯಲ್ಲಿ ಪತ್ತೆಯಾಗಿದೆ. ಮಧುರಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ.
ಶಾಸಕ ಆರಗ ಜ್ಞಾನೇಂದ್ರ ಅವರು ಮಧುರಾ ಅವರ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]