ಮದುವೆ ವಾರ್ಷಿಕೋತ್ಸವದ ಮುನ್ನಾ ದಿನ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | AGUMBE NEWS | 25 MAY 2021

ಮದುವೆ ವಾರ್ಷಿಕೋತ್ಸವದ ಮುನ್ನಾ ದಿನವೇ ಗೃಹಿಣಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಂಡ ಮತ್ತು ಅತ್ತೆಯೆ ಹತ್ಯೆ ಮಾಡಿ, ನೇಣು ಬಿಗಿದಿದ್ದಾರೆ ಎಂದು ಗೃಹಿಣಿಯ ಪೋಷಕರು ಆರೋಪಿಸಿದ್ದಾರೆ.

ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಮದ ಬಿಳಿಗಿರಿಯಲ್ಲಿ ಘಟನೆ ಸಂಭವಿಸಿದೆ. ಜ್ಯೋತಿ (25) ಮೃತಳು. ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಜ್ಯೋತಿ ಪೋಷಕರು ದೂರು ನೀಡಿದ್ದು, ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ.

2016ರ ಮೇ 24ರಂದು ಬಿಳಿಗಿರಿಯ ದಯಾನಂದ ಶೆಟ್ಟಿ ಎಂಬುವವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಆ ಬಳಿಕ ವರದಕ್ಷಿಣೆ ಕಿರುಕುಳ ಆರಂಭವಾಗಿತ್ತು. ಇದೆ ಕಾರಣಕ್ಕೆ ಮೇ 23ರಂದು ಮಗಳನ್ನು ಹೊಡೆದು ಕೊಲೆ ಮಾಡಲಾಗಿದೆ ಎಂದು ಜ್ಯೋತಿ ಪೋಷಕರು ಆರೋಪಿಸಿ, ದೂರು ನೀಡಿದ್ದಾರೆ.

ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment