ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 APRIL 2023
SORABA : ಒಂದೂವರೆ ತಿಂಗಳ ಹೆಣ್ಣು ಮಗುವಿನೊಂದಿಗೆ (Baby) ಕೆರೆಗೆ ಹಾರಿ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆರೆಯಲ್ಲಿ ಮಗುವಿನ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಶೋಧ ಕಾರ್ಯ ನಡೆಸಿದಾಗ ಮಗುವಿನೊಂದಿಗೆ ತಾಯಿಯು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಸೊರಬ ತಾಲೂಕು ಕುಪ್ಪಗಡ್ಡೆ ಗ್ರಾಮದ ತುಂಬೆ ಹೊಂಡದಲ್ಲಿ ಘಟನೆ ಸಂಭವಿಸಿದೆ. ಶಾಂತಾ (28), ಒಂದೂವರೆ ತಿಂಗಳ ಹೆಣ್ಣು ಮಗು ಮಂಗಳಾ ಗೌರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಫ್ಲೈ ಓವರ್ ಬಳಿ ಅಪಘಾತ, ಲಾರಿ ಕೆಳಗೆ ಸಿಲುಕಿದ ಬೈಕ್ ಸವಾರ, ಚಾಲಕ ಎಸ್ಕೇಪ್
ತಾಯಿ ಹಾಲು ಕಡಿಮೆಯಾಗಿದ್ದು ಮಗು ಸೊರಗಿದೆ ಎಂದು ಶಾಂತಾ ಮಾನಸಿಕವಾಗಿ ಕುಗ್ಗಿದ್ದರು ಎಂದು ಹೇಳಲಾಗುತ್ತಿದೆ. ಇದೆ ಕಾರಣಕ್ಕೆ ಶನಿವಾರ ರಾತ್ರಿ ಶಾಂತಾ, ಮಗುವಿನೊಂದಿಗೆ (Baby) ತುಂಬೆ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಭಾನುವಾರ ಬೆಳಗ್ಗೆ ಕೆರೆಯಲ್ಲಿ ಮಗುವಿನ ಮೃತದೇಹ ಗಮನಿಸಿದ ಸ್ಥಳೀಯರು ಆನವಟ್ಟಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ – ದೇವರ ಕಾರ್ಯಕ್ಕೆ ಊರಿಗೆ ಹೋದವರಿಗೆ ಎದುರು ಮನೆಯವರಿಂದ ಬಂತು ಆಘಾತಕಾರಿ ಫೋನ್ ಕರೆ
ಶಾಂತಾಳನ್ನು ಜಡ್ಡಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಬಾಣಂತನಕ್ಕಾಗಿ ಕುಪ್ಪಗಡ್ಡೆಯಲ್ಲಿರುವ ತಾಯಿ ಮನೆಗೆ ಶಾಂತಾ ಬಂದಿದ್ದಾಗ ಘಟನೆ ಸಂಭವಿಸಿದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ, ಕೈ ಮೇಲಿದೆ ರಾಜಾಹುಲಿ, ವಿಷ್ಣುದಾದ ಹಚ್ಚೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422