ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 JUNE 2024
SHIMOGA : ಕದ್ದ ಚಿನ್ನದ ಆಭರಣವನ್ನ (JEWELS) ತನ್ನದು ಎಂದು ನಂಬಿಸಿ ಅಡವಿಟ್ಟು ಹಣ ಪಡೆದಿದ್ದ ಮಹಿಳೆ ವಿರುದ್ಧ ಮಣಪ್ಪುರಂ ಫೈನಾನ್ಸ್ ಸಂಸ್ಥೆ ದೂರು ನೀಡಿದೆ. ಪೂಜಾ ಎಂಬಾಕೆ 2022ರಲ್ಲಿ 25.6 ಗ್ರಾಂ ಚಿನ್ನದ ಆಭರಣವನ್ನು ಮಣಪ್ಪುರಂ ಫೈನಾನ್ಸ್ ಸಂಸ್ಥೆಯಲ್ಲಿ ಅಡವಿಟ್ಟಿದ್ದಳು. 84 ಸಾವಿರ ರೂ. ಸಾಲದ ಹಣ ಪಡೆದಿದ್ದಳು ಎಂದು ಆರೋಪಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ಠಾಣೆ ಪೊಲೀಸರು, ಪೂಜಾ ಅಡವಿಟ್ಟ ಚಿನ್ನ ಕಳ್ಳತನದ್ದು ಎಂದು ಆರೋಪಿಸಿ ವಶಕ್ಕೆ ಪಡೆದಿದ್ದರು. ಕಳ್ಳತನದ ಚಿನ್ನವನ್ನು ತನ್ನದೆಂದು ನಂಬಿಸಿ ತಮ್ಮ ಸಂಸ್ಥೆಗೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ, ಆಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಣಪ್ಪುರಂ ಫೈನಾನ್ಸ್ ಸಂಸ್ಥೆ ಶಿವಮೊಗ್ಗ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು. ನ್ಯಾಯಾಲಯದ ಸೂಚನೆ ಮೇರೆಗೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಆಗುಂಬೆ ಬಳಿ ಸಿಡಿಲಿಗೆ ವ್ಯಕ್ತಿ ಬಲಿ, ಜಾವಳ್ಳಿಯಲ್ಲಿ ಅಂಗಡಿ ಆಹುತಿ
LATEST NEWS
- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















