ಪತಿಯೊಂದಿಗೆ ಶಿವಮೊಗ್ಗದಿಂದ ಭದ್ರಾವತಿಗೆ ಬಸ್ಸಿನಲ್ಲಿ ತೆರಳಿ ಆಟೋ ಹತ್ತಿದ ಮಹಿಳೆಗೆ ಕಾದಿತ್ತು ಬಿಗ್‌ ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

‌SHIVAMOGGA LIVE NEWS | 28 NOVEMBER 2023

SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌ಗಳ (purse) ಕಳವು ಪ್ರಕರಣ ಮುಂದುವರೆದಿದೆ. ಈವರೆಗೆ ಪ್ಲಾಟ್‌ ಫಾರಂನಲ್ಲಿ ಕೃತ್ಯ ಎಸಗುತ್ತಿದ್ದ ಖದೀಮರು, ಈಗ ಭದ್ರಾವತಿ ಬಸ್‌ಗಳು ನಿಲ್ಲುವೆಡೆ ಮಹಿಳೆಯೊಬ್ಬರ ಬ್ಯಾಗ್‌ನಿಂದ ಪರ್ಸ್‌ ಲಪಟಾಯಿಸಿದ್ದಾರೆ.

ಭದ್ರಾವತಿಯಲ್ಲಿ ಇಳಿದಾಗ ಶಾಕ್‌

ಶಿವಮೊಗ್ಗದಲ್ಲಿ ಸಂಬಂಧಿಯೊಬ್ಬರ ಮನೆಯಲ್ಲಿ ನಾಮಕರಣ ಕಾರ್ಯಕ್ರಮ ಮುಗಿಸಿ ವಿಜಯಾ ಎಂಬುವವರು ತಮ್ಮ ಪತಿಯೊಂದಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಭದ್ರಾವತಿಗೆ ತೆರಳಿದ್ದರು. ಆಟೋದಲ್ಲಿ ಮನೆವರೆಗೆ ತಲುಪಿ ಹಣ ಕೊಡಲು ವ್ಯಾನಿಟಿ ಬ್ಯಾಗ್‌ನಲ್ಲಿ ಪರ್ಸ್‌ (purse) ಹುಡುಕಿದಾಗ ನಾಪತ್ತೆಯಾಗಿತ್ತು. ಪರ್ಸ್‌ನಲ್ಲಿ ಎರಡು ಜೊತೆ ಕಿವಿಯೋಲೆಗಳು, ಚಿನ್ನದ ಸರ, ಬಂಗಾರದ ಬಳೆಗಳು ಇದ್ದವು. ಇವುಗಳ ಮೌಲ್ಯ 1.80 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ- ಕುವೆಂಪು ವಿವಿಯಲ್ಲಿ ಕೌನ್ಸೆಲಿಂಗ್‌, ಮೊದಲ ದಿನ ಶೇ.85ರಷ್ಟು ಮೆರಿಟ್‌ ಸೀಟ್‌ ಭರ್ತಿ, ಹೇಗಿತ್ತು ವ್ಯವಸ್ಥೆ?

ಬಸ್‌ ಹತ್ತುವಾಗಲೆ ನಡೆಯಿತಾ ಕೃತ್ಯ?

ವಿಜಯಾ ಅವರು ಪತಿಯೊಂದಿಗೆ ನ.22ರಂದು ಸಂಜೆ 5.45ಕ್ಕೆ ಶಿವಮೊಗ್ಗದ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಭದ್ರಾವತಿ ಬಸ್‌ ಹತ್ತಿದ್ದರು. ಬಸ್‌ನಲ್ಲಿ ರಶ್‌ ಇದ್ದಿದ್ದರಿಂದ ಸೀಟ್‌ ಸಿಕ್ಕಿರಲಿಲ್ಲ. ಹಾಗಾಗಿ ಭದ್ರಾವತಿವರೆಗೆ ನಿಂತು ಪ್ರಯಾಣಿಸಿದ್ದರು. ಭದ್ರಾವತಿ ನಿಲ್ದಾಣದಲ್ಲಿ ಇಳಿದು ಆಟೋ ಹತ್ತಿದ್ದರು. ಶಿವಮೊಗ್ಗದಲ್ಲಿ ಬಸ್‌ ಹತ್ತುವ ಸಂದರ್ಭ ರಶ್‌ ಇತ್ತು. ಈ ವೇಳೆ ಕಳ್ಳರು ಬ್ಯಾಗ್‌ನಲ್ಲಿದ್ದ ಪರ್ಸ್‌ ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 28, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment